Advertisement

ಹಾರಂಗಿಗೆ ಸಿಎಂ ಬಾಗಿನ

10:24 AM Jul 20, 2018 | |

ಮಡಿಕೇರಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು  ಪತ್ನಿ ಅನಿತಾ ಅವರೊಂದಿಗೆ ಗುರುವಾರ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಅವರೊಂದಿಗೆ ಬೃಹತ್‌ ಮತ್ತು ಮಧ್ಯಮ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್‌, ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ, ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ. ಮಹೇಶ್‌ ಇದ್ದರು.  ಪಿರಿಯಾಪಟ್ಟಣದಿಂದ ರಸ್ತೆ ಮೂಲಕ ಹಾರಂಗಿಗೆ ಆಗಮಿಸಿದ ಅವರು ಜಲಾಶಯದ ಬಳಿ ಇರುವ ಕಾವೇರಿ ಮಾತೆಗೆ ಮೊದಲು ಪೂಜೆ ಸಲ್ಲಿಸಿದರು.

Advertisement

ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಅವರು, 35 ವರ್ಷಗಳ ಬಳಿಕ ಕೊಡಗಿನಲ್ಲಿ ಉತ್ತಮ ಮಳೆಯಾಗಿದೆ. ರಾಜ್ಯದ ಎಲ್ಲ ಅಣೆಕಟ್ಟುಗಳು, ಕೆರೆಗಳು ಸಂಪೂರ್ಣ ತುಂಬಿವೆ, ಈ ಮಳೆ ಕೊಡಗು ಜಿಲ್ಲೆಯ ಮಟ್ಟಿಗೆ ಸಾಕಷ್ಟು ನಷ್ಟವನ್ನೂ ಉಂಟು ಮಾಡಿದೆ. ಜನರ ಕಷ್ಟಗಳಿಗೆ ಸರಕಾರ ಸ್ಪಂದಿಸಲಿದೆ ಎಂದರು. ಮಳೆಯಿಂದಾದ ನಷ್ಟಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳ ಜೊತೆ ಚರ್ಚಿಸಿ ಸೂಕ್ತ ಪರಿಹಾರ ನೀಡಲಾಗುವುದು ಎಂದರು. ಮಾತ್ರವಲ್ಲದೆ ಹಾಸನ, ಮೈಸೂರು, ಮಂಗಳೂರು ಮುಂತಾದ ಜಿಲ್ಲೆಗಳಲ್ಲೂ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುವುದರೊಂದಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next