Advertisement

ನೀರುಗಳ್ಳತನ ತಡೆಗೆ ಸಿಎಂ ಸೂಚನೆ

12:20 PM Aug 08, 2018 | Team Udayavani |

ಬೆಂಗಳೂರು: ತುಂಗಭದ್ರಾ ಎಡದಂಡೆ ಕಾಲುವೆ ನೀರುಗಳ್ಳತನ ತಡೆಯಲು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

Advertisement

ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ರಾಯಚೂರು ಜಿಲ್ಲೆ ಮಾನವಿ ಶಾಸಕ ರಾಜಾ ವೆಂಕಟಪ್ಪ ನಾಯಕ್‌, ನೀರುಗಳ್ಳತನ ತಡೆಯಲು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಿಎಂ ಕುಮಾರಸ್ವಾಮಿ, ನೀರುಗಳ್ಳತನ ತಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಾಜಾ ವೆಂಕಟಪ್ಪ ನಾಯಕ್‌, ಕೊಪ್ಪಳ ಭಾಗದಲ್ಲಿ ಅನಧಿಕೃತ ಪಂಪ್‌ಸೆಟ್‌ಗಳನ್ನು ಅಳವಡಿಸಾಲಾಗಿದೆ. ಕಾಲುವೆ ನೀರನ್ನು ಅಕ್ರಮವಾಗಿ ಹರಿಸಲಾಗುತ್ತಿದೆ. ಇದರಿಂದ ಕೆಳಭಾಗದ ರೈತರ ಜಮೀನುಗಳಿಗೆ ನೀರು ಸಿಗುತ್ತಿಲ್ಲ.

ಅಲ್ಲದೇ 69ನೇ ಮೈಲಿಯಲ್ಲಿ ಗೇಜ್‌ ಪಾಲನೆ ಆಗುತ್ತಿಲ್ಲ ಎಂದು ಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದೇನೆ. ನೀರು ಕಳ್ಳತನ ತಡೆಯುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ ಕೊಟ್ಟಿದ್ದಾರೆ. ಹಾಗಾಗಿ ಮಾನವಿ ತಾಲೂಕಿನ ರೈತರು ಆತಂಕಪಡಬೇಕಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next