Advertisement
ಚಿಕ್ಕಬಳ್ಳಾಪುರದಲ್ಲಿ ಮಳೆಯಿಂದ ಹಾನಿಗೀಡಾಗಿರುವ ಪ್ರದೇಶಗಳನ್ನು ವೀಕ್ಷಣೆ ಮಾಡಿ, ಅಧಿಕಾರಿಗಳಿಂದ ಹಾನಿಯ ವಿವರ ಪಡೆದರು.
Related Articles
Advertisement
ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದರೆ 10 ಸಾವಿರ, ಪೂರ್ಣಪ್ರಮಾಣದಲ್ಲಿ ಮನೆ ಕುಸಿದು ಬಿದ್ದಿದ್ದರೆ ಕೂಡಲೇ 95 ಸಾವಿರ ನೀಡಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ ಅದರ ಜೊತೆಗೆ ಸರ್ಕಾರದಿಂದ ಪೂರ್ಣವಾಗಿ ಬಿದ್ದಿರುವ ಮನೆಗೆ 5 ಲಕ್ಷ ರೂಗಳು ಮತ್ತು ಭಾಗಶಃ ಬಿದ್ದಿರುವ ಮನೆಗಳಿಗೆ 3ಲಕ್ಷ ಹಾಗೂ ಅಲ್ಪ ಪ್ರಮಾಣದಲ್ಲಿ ಕುಸಿದ ಮನೆಗೆ 50 ಸಾವಿರ ಪರಿಹಾರ ನೀಡುವ ಯೋಜನೆಯನ್ನು ಮುಂದುವರೆಸಿದ್ದೇವೆ ಇಡೀ ಜಿಲ್ಲೆಯಲ್ಲಿ 24 ಮನೆಗಳು ಸಂಪೂರ್ಣವಾಗಿ ಕುಸಿದಿದೆ 1078 ಮನೆ ಭಾಗಶಃ ಕುಸಿದಿದೆ 05 ದೊಡ್ಡ ದನ ಹಾಗೂ 46 ದನಕರುಗಳು ಮೃತಪಟ್ಟಿವೆ ಅದಕ್ಕೆಲ್ಲಾ ಕೂಡಲೇ ಪರಿಹಾರವನ್ನು ನೀಡುತ್ತೇವೆ ಎಂದರು.
ಚಿಕ್ಕಬಳ್ಳಾಪುರ ನಗರ ಪ್ರದೇಶದಲ್ಲಿ ಸುಮಾರು 55 ಮನೆಗಳಿಗೆ ಧಕ್ಕೆಯಾಗಿದೆ ಪೂರ್ಣ ಪ್ರಮಾಣದಲ್ಲಿ 13 ಮನೆಗಳು ಕುಸಿದಿದೆ 42 ಮನೆಗಳಿಗೆ ಸಹ ತೊಂದರೆಯಾಗಿದೆ ಅದಕ್ಕೆ ಪರಿಹಾರ ನೀಡಲು ಸೂಚನೆ ನೀಡಿದ್ದೇನೆ ಅದೇ ರೀತಿಯಲ್ಲಿ ಜಿಲ್ಲೆಯಲ್ಲಿ ಬೆಳೆ ಹಾನಿಯಾಗಿರುವ ಕುರಿತು ಸಮೀಕ್ಷೆ ನಡೆಸಲು ನಿರ್ದೇಶನ ನೀಡಿದ್ದೇನೆ ಕಳೆದ ಎರಡು ದಿನಗಳಿಂದ ಬೆಳೆ ಹಾನಿ ಕುರಿತು ಪ್ರಾಥಮಿಕ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸೂಚನೆ ನೀಡಿದ್ದು ಇಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಪರಿಹಾರವನ್ನು ಘೋಷಣೆ ಮಾಡುವುದಾಗಿ ಹೇಳಿದರು.
ರಾಜ್ಯದಲ್ಲಿ ಎಲ್ಲ ಸಚಿವರಿಗೂ ಜಿಲ್ಲೆಗಳಿಗೆ ಹೋಗಿ ಬೆಳೆ ಹಾನಿಯಾಗಿರುವ ಪ್ರದೇಶಗಳಿಗೆ ತೆರಳಲು ಸೂಚನೆ ನೀಡಿದ್ದೇನೆ ಸಚಿವರ ಭೇಟಿ ವೇಳೆ ಎಲ್ಲ ಅಧಿಕಾರಿಗಳು ಹಾಜರಿರಬೇಕು. ಚುನಾವಣಾ ಅಧಿಕಾರಿಗಳಿಗೆ ನಾನು ಪತ್ರವನ್ನು ಬರೆದು ಅಧಿಕಾರಿಗಳು ಜೊತೆಯಲ್ಲಿರಲು ಮನವಿ ಮಾಡಿದ್ದೇವೆ ನಾಳೆ ಕೋಲಾರ ಸೇರಿದಂತೆ ಬೇರೆ ಕಡೆ ಹೋಗಿ ಪರಿಶೀಲಿಸುತ್ತೇನೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಟೀಕೆ ಮಾಡುತ್ತಿರಲಿ ನಾವು ಕೆಲಸ ಮಾಡುತ್ತೇವೆ
ಮುಖ್ಯಮಂತ್ರಿಗಳಿಂದ ಬರ್ಬಾದ್ ಸಮಾವೇಶ ಅನ್ನೊ ಸಿದ್ದರಾಮಯ್ಯ ಅವರ ಟೀಕೆ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ ವಿರೋಧ ಪಕ್ಷದವರು ಟೀಕೆ ಮಾಡುತ್ತಿರಲಿ ನಾವು ಕೆಲಸ ಮಾಡುತ್ತೇವೆ ಕೆಲವು ಸಚಿವರು ಜಿಲ್ಲೆಯಲ್ಲಿ ಇದ್ದಾರೆ. ಮಳೆಹಾನಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲೆಗಳಲ್ಲಿ ಕೆಲಸ ಮಾಡ್ತಿದ್ದಾರೆ. ಮಳೆ ಹಾನಿ ವೀಡಿಯೋ ಸಂವಾದ ನಡೆಸಲು ಚುನಾವಣಾ ಆಯೋಗದ ಅನುಮತಿ ಬೇಕು ಅಂದ್ರು. ಇನ್ನೂ ಕೆಲವರು ಕೆಲವು ಜಿಲ್ಲೆಗಳಿಗೆ ಪ್ರವಾಸ ಹೋಗಬೇಕು. ಅಧಿಕಾರಿಗಳನ್ನು ಕರೆದುಕೊಂಡು ಹೋಗಲು ನೀತಿ ಸಂಹಿತೆ ಅಡ್ಡ ಇದೆ ವಿನಾಯಿತಿ ಕೋರಿ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್.ಅಶೋಕ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್, ಸಂಸದ ಎಸ್.ಮುನಿಸ್ವಾಮಿ, ರಾಜ್ಯ ಮಾವು ಅಭಿವೃಧ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜ್, ನಗರಸಭೆಯ ಅಧ್ಯಕ್ಷ ಡಿ.ಎಸ್.ಆನಂದ್‍ರೆಡ್ಡಿ(ಬಾಬು) ಜಿಲ್ಲಾಧಿಕಾರಿ ಆರ್.ಲತಾ, ಜಿಪಂ ಸಿಇಓ ಪಿ.ಶಿವಶಂಕರ್, ಜಿಲ್ಲಾ ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಡಿವೈಎಸ್ಪಿ ವಾಸುದೇವ್, ತಹಶೀಲ್ದಾರ್ ಗಣಪತಿ ಶಾಸ್ತ್ರೀ ಮತ್ತಿತರರು ಉಪಸ್ಥಿತರಿದ್ದರು.