Advertisement

ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಿಎಂ ಸೂಚನೆ

10:22 PM Aug 30, 2021 | Team Udayavani |

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ ಗಳನ್ನು ಶೀಘ್ರ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

Advertisement

ಸೋಮವಾರ ವಿಧಾನಸೌಧದಲ್ಲಿ ನಡೆದ ದೌರ್ಜನ್ಯ ಪ್ರತಿಬಂಧ ಅಧಿನಿಯಮದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ದೌರ್ಜನ್ಯ ಪ್ರಕರಣಗಳ ವಿಲೇವಾರಿ ಸಂಬಂಧ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರು ಗೃಹ ಮತ್ತು ಕಾನೂನು ಇಲಾಖೆ ಯೊಂದಿಗೆ ಸಮನ್ವಯ ವಹಿಸಿ ಕಾರ್ಯನಿರ್ವಹಿಸುವಂತೆ ನಿರ್ದೇ ಶನ ನೀಡಿದರು.

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ, ದೌರ್ಜನ್ಯ ಪ್ರಕರಣಗಳ ದೂರು ದಾರರು ಮತ್ತು ಸಾಕ್ಷಿದಾರರ ರಕ್ಷಣೆಗೆ ಒತ್ತು ನೀಡಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರುದಾರರು ಮತ್ತು ಸಾಕ್ಷಿಧಾರರನ್ನು ಪೊಲೀಸರೇ ಕರೆದೊಯ್ಯುವಂತೆ ಸೂಚಿಸಲಾಗಿದೆ. ಜತೆಗೆ ಈ ಪ್ರಕರಣಗಳ ಸಂಪೂರ್ಣ ಮೇಲುಸ್ತುವಾರಿಗೆ ಹೆಚ್ಚುವರಿ ಅಡ್ವೊ ಕೇಟ್‌ ಜನರಲ್‌ ಅವರನ್ನು ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಸಭೆಯ ತೀರ್ಮಾನಗಳ ಕುರಿತು ಪ್ರತಿ ತಿಂಗಳೂ ಪರಿಶೀ ಲನೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚಿಸಲಾಗಿದೆ. ರಾಜ್ಯ ಮಟ್ಟದ ಸಮಿತಿಯು ತುರ್ತು ವಿಷಯಗಳಿದ್ದಲ್ಲಿ 3 ತಿಂಗಳಿಗೊಮ್ಮೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಮೂರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿಗಳ ಹಂತದಲ್ಲಿ ಸಭೆಗಳು ನಿಯಮಿತವಾಗಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟವರ ಅವಲಂಬಿತರಿಗೆ ಅನುಕಂಪ ಆಧಾರದಲ್ಲಿ ಸರಕಾರಿ ನೌಕರಿಗೆ ಅರ್ಜಿ ಸಲ್ಲಿಸಲು 2 ವರ್ಷ ಅವಧಿ ಹಾಗೂ ಅಪ್ರಾಪ್ತ ವಯಸ್ಕರಿಗೆ ಅರ್ಜಿ ಸಲ್ಲಿಸಲು 3 ವರ್ಷ ಅವಧಿ ನಿಗದಿ ಪಡಿಸಿ ನಿಯಮ ತಿದ್ದುಪಡಿ ಮಾಡಲಾಗುವುದು ಎಂದರು.

Advertisement

ಸಭೆಯಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬಿ. ಶ್ರೀರಾಮುಲು, ಜೆ.ಸಿ. ಮಾಧುಸ್ವಾಮಿ  ಉಪಸ್ಥಿತರಿದ್ದರು.

ನಕಲಿ ಜಾತಿ ಪ್ರಮಾಣ ಪತ್ರ ವಿರುದ್ಧ ಕ್ರಮ:

ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ, ಈ ಸಮುದಾಯಗಳ ಹಕ್ಕು ಕಸಿದುಕೊಳ್ಳುವವರ ವಿರುದ್ಧ ಹಾಗೂ ನಕಲಿ ಜಾತಿ ಪ್ರಮಾಣ ಪತ್ರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಸಭೆಯಲ್ಲಿ ನಿರ್ದೇಶನ ನೀಡಲಾಗಿದೆ ಎಂದು ಸಿಎಂ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next