Advertisement
ಗೃಹ ಕಚೇರಿ “ಕೃಷ್ಣಾ’ದಲ್ಲಿ ಸೋಮವಾರ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಜಿಎಸ್‌ಟಿ ಹಾಗೂ ಇತರೆ ತೆರಿಗೆ ಸಂಗ್ರಹ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ವಾಣಿಜ್ಯ ತೆರಿಗೆ ಮೂಲದಿಂದ ಪ್ರಸಕ್ತ ವರ್ಷದಲ್ಲಿ 76,046 ಕೋಟಿ ರೂ. ತೆರಿಗೆ ಸಂಗ್ರಹ ಗುರಿಯಿದ್ದು, ಈವರೆಗೆ 42,823 ಕೋಟಿ ರೂ. ಸಂಗ್ರಹವಾಗಿದೆ. ಒಟ್ಟಾರೆ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ.10.3ರಷ್ಟಿದ್ದು, ವಾರ್ಷಿಕ ಗುರಿಯ ಶೇ.56.3 ತೆರಿಗೆ ಸಂಗ್ರಹವಾಗಿದೆ.
Related Articles
Advertisement
ನಿಗದಿತ ಗುರಿ ತಲುಪಲು ಶ್ರಮಿಸಿ: ಉತ್ತಮವಾಗಿ ತೆರಿಗೆ ಸಂಗ್ರಹಕ್ಕೆ ಆದ್ಯತೆ ನೀಡಬೇಕು. ತೆರಿಗೆ ವಂಚನೆ, ನಕಲಿ ನೋಂದಣಿ ಇತರೆ ಪ್ರಕರಣಗಳಲ್ಲಿ ತನಿಖೆ ನಡೆಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸರಕು ಸಾಗಣೆ ಸಂದರ್ಭದಲ್ಲಿ ತಪಾಸಣೆ ನಡೆಸಿ ಸದಾ ಜಾಗೃತರಾಗಿರಬೇಕು. ಹಣಕಾಸು ವರ್ಷಾಂತ್ಯದೊಳಗೆ ನಿಗದಿತ ಗುರಿ ತಲುಪಲು ಶ್ರಮಿಸಬೇಕು ಎಂದು ಸಿಎಂ ಯಡಿಯೂರಪ್ಪ ಸೂಚನೆ ನೀಡಿದರು. ಅನ್ಯ ರಾಜ್ಯಗಳಿಗಿಂತ ಕರ್ನಾಟಕವು ತೆರಿಗೆ ಸಂಗ್ರಹದಲ್ಲಿ ಉತ್ತಮ ಸ್ಥಿತಿಯಲ್ಲಿದ್ದರೂ ನಾವು ಇನ್ನಷ್ಟು ಸಾಧನೆಗೆ ಪ್ರಯತ್ನಿಸಬೇಕು.
ಭಾರೀ ಮೊತ್ತದ ತೆರಿಗೆ ಪಾವತಿಸುವವರ ಬಗ್ಗೆ ಹೆಚ್ಚು ಗಮನ ಹರಿಸುವ ನಿಟ್ಟಿನಲ್ಲಿ “ಜಿಎಸ್‌ಟಿಪ್ರೊ’ ಎಂಬ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದ್ದು, ಇತರೆ ರಾಜ್ಯಗಳು ಹಾಗೂ ಕೇಂದ್ರ ಸರ್ಕಾರವೂ ಈ ಬಗ್ಗೆ ಆಸಕ್ತಿ ತೋರಿವೆ. ಛತ್ತೀಸ್‌ಘಡ ಹಾಗೂ ಮಹಾರಾಷ್ಟ್ರದಲ್ಲಿ ಈ ವ್ಯವಸ್ಥೆಯನ್ನು ಯಥಾವತ್ತಾಗಿ ಜಾರಗೊಳಿಸಲಾಗಿದೆ. “ಇ-ವೇ’ ಬಿಲ್ ತಪಾಸಣೆಯಲ್ಲೂ ರಾಜ್ಯ ಮುಂಚೂಣಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ವ್ಯಾಪಕವಾಗಿ ತಪಾಸಣೆ ಕೈಗೊಳ್ಳಬೇಕು ಎಂದು ಸೂಚಿಸಿದರು.