Advertisement

ಕಾಂಗ್ರೆಸ್‌ ಸೇರಲು ಸಿಎಂ ಆಹ್ವಾನ

07:00 AM Oct 12, 2017 | Team Udayavani |

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಸೇರಿದ್ದ ಹಿಂದುಳಿದ ವರ್ಗದ ನಾಯಕರನ್ನು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ ಸೇರುವಂತೆ ಆಹ್ವಾನ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ರಾಯಣ್ಣ ಬ್ರಿಗೇಡ್‌ ಸ್ಥಗಿತಗೊಂಡಿರುವುದರಿಂದ ಮಾಜಿ ಮೇಯರ್‌ ವೆಂಕಟೇಶ್‌ ಮೂರ್ತಿ ಹಾಗೂ ಇತರ ನಾಯಕರನ್ನು ಸಂಪರ್ಕಿಸಿರುವ ಸಿಎಂ ಕಾಂಗ್ರೆಸ್‌ ಸೇರಿದರೆ ಸೂಕ್ತ ಸ್ಥಾನಮಾನ ಹಾಗೂ ಮುಂದಿನ ಚುನಾವಣೆಯಲ್ಲಿ ಟಿಕೆಟ್‌ ನೀಡುವ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ವೆಂಕಟೇಶ್‌ ಮೂರ್ತಿ, ಮುಖ್ಯಮಂತ್ರಿ ಕಾಂಗ್ರೆಸ್‌ ಸೇರುವಂತೆ ಆಹ್ವಾನ ನೀಡಿದ್ದಾರೆ. ಈ ಕುರಿತು ಕೆ.ಎಸ್‌.ಈಶ್ವರಪ್ಪ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next