Advertisement
ಅತಿಕ್ರಮಣ ವಿರೋಧಿ ಅಭಿಯಾನ ಕುರಿತು ಆಮ್ ಆದ್ಮಿ ಪಕ್ಷದ ಶಾಸಕರೊಂದಿಗಿನ ಸಭೆಯಲ್ಲಿ ಕೇಜ್ರಿವಾಲ್ ಅವರು ದೆಹಲಿಯ ವಿವಿಧ ಭಾಗಗಳಲ್ಲಿ ಬಿಜೆಪಿ ನೇತೃತ್ವದ ಮುನ್ಸಿಪಲ್ ಕಾರ್ಪೊರೇಷನ್‌ಗಳು ನಡೆಸುತ್ತಿರುವ ಅತಿಕ್ರಮಣ ವಿರೋಧಿ ಅಭಿಯಾನವನ್ನು ವಿರೋಧಿಸಿ ಜೈಲಿಗೆ ಹೋಗಲು ಸಿದ್ಧರಾಗಿರಬೇಕು ಎಂದು ಹೇಳಿದರು.
Related Articles
Advertisement
ಇದನ್ನೂ ಓದಿ : ಸೈದ್ದಾಂತಿಕ ಬದ್ಧತೆಯ ಬಗ್ಗೆ ರಾಹುಲ್ ಗಾಂಧಿ ಬಿಡಿಸಿ ಹೇಳಬೇಕು: ಕುಮಾರಸ್ವಾಮಿ
“63 ಲಕ್ಷ ಜನರ ಮನೆಗಳು ಮತ್ತು ಅಂಗಡಿಗಳನ್ನು ಬುಲ್ಡೋಜರ್ ನಿಂದ ನಾಶ ಮಾಡಲಾಗುತ್ತದೆ. ಇದು ಸ್ವತಂತ್ರ ಭಾರತದಲ್ಲಿ ಆಗುತ್ತಿರುವ ದೊಡ್ಡ ವಿನಾಶವಾಗಲಿದೆ ಎಂದು ಅವರು ಹೇಳಿದರು.
ಆಮ್ ಆದ್ಮಿ ಪಕ್ಷವು ಅತಿಕ್ರಮಣಕ್ಕೆ ವಿರುದ್ಧವಾಗಿದೆ ಮತ್ತು ದೆಹಲಿ ಸುಂದರವಾಗಿ ಕಾಣಬೇಕೆಂದು ಬಯಸುತ್ತದೆ ಎಂದ ಅವರು, 63 ಲಕ್ಷ ಜನರ ಮನೆ ಮತ್ತು ಅಂಗಡಿಗಳನ್ನು ಧ್ವಂಸಗೊಳಿಸುವುದನ್ನು ಸಹಿಸಲಾಗುವುದಿಲ್ಲ ಎಂದು ಹೇಳಿದರು.
”ಕಳೆದ 15 ವರ್ಷಗಳಲ್ಲಿ ಬಿಜೆಪಿ ಎಂಸಿಡಿಯಲ್ಲಿ ಅಧಿಕಾರದಲ್ಲಿತ್ತು ಮತ್ತು ಹಣವನ್ನು ತೆಗೆದುಕೊಂಡಿತು. ಮೇ 18ಕ್ಕೆ ಅವರ ಅಧಿಕಾರಾವಧಿ ಕೊನೆಗೊಳ್ಳಲಿದೆ. ಇಂತಹ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಂವಿಧಾನಿಕ ಅಧಿಕಾರ ನಿಮಗಿದೆಯೇ? ಚುನಾವಣೆ ನಡೆಯಲಿ ಆ ಪಕ್ಷವೇ ನಿರ್ಧಾರ ತೆಗೆದುಕೊಳ್ಳಲಿ. ಎಂಸಿಡಿಯಲ್ಲಿ ಎಎಪಿ ಅಧಿಕಾರಕ್ಕೆ ಬರಲಿದೆ ಎಂಬುದು ಎಲ್ಲರಿಗೂ ತಿಳಿದಿದೆ, ಎಎಪಿ ಅತಿಕ್ರಮಣ ಸಮಸ್ಯೆಯನ್ನು ಪರಿಹರಿಸುತ್ತದೆ ಮತ್ತು ಅನಧಿಕೃತ ಕಾಲೋನಿಗಳಲ್ಲಿ ವಾಸಿಸುವ ಜನರು ಮಾಲೀಕತ್ವದ ಹಕ್ಕುಗಳನ್ನು ಪಡೆಯುತ್ತಾರೆ ಎಂದು ಅವರು ಜನರಿಗೆ ಭರವಸೆ ನೀಡಿದರು.