Advertisement

ಹಿರಿಯಣ್ಣನಂತೆ ಅಹವಾಲು ಆಲಿಸಿದ ಸಿಎಂ ಕುಮಾರಣ್ಣ

06:05 AM Sep 16, 2018 | |

ಬೆಳಗಾವಿ: ಸಾಲಾಗಿ ಕುಳಿತಿರುವ ವಿಕಲಚೇತನರು. ಎಲ್ಲರ ಮೊಗದಲಿ ನಿರೀಕ್ಷೆ ಒಂದೆಡೆಯಾದರೆ ನಾಡಿನ ಸಿಎಂ ಸ್ವತಃ ತಮ್ಮ ಬಳಿ ಬಂದು ಅಹವಾಲು ಆಲಿಸಿಯಾರೇ ಎಂಬ ಪ್ರಶ್ನಾರ್ಥಕ ಭಾವ ಇನ್ನೊಂದೆಡೆ. ಆದರೆ ಯಾರ ನಿರೀಕ್ಷೆಯೂ
ಹುಸಿಯಾಗಲಿಲ್ಲ.

Advertisement

ಸುವರ್ಣ ವಿಧಾನಸೌಧದ ದಕ್ಷಿಣದ್ವಾರದ ಬಳಿಯ ನೆಲಮಹಡಿಯಲ್ಲಿ ಗಂಟೆಗಟ್ಟಲೆ ಕಾದು ಕುಳಿತಿದ್ದ ದಿವ್ಯಾಂಗರ
ಬಳಿ ತೆರಳಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಅತ್ಯಂತ ತಾಳ್ಮೆಯಿಂದ ಅಹವಾಲುಗಳನ್ನು ಸ್ವೀಕರಿಸಿದರು. ಹೆಗಲ ಮೇಲೊಂದು ಟವಲ್‌ ಹಾಕಿಕೊಂಡು ಮನೆಯ ಯಜಮಾನನಂತೆ ಸಮಾಧಾನದಿಂದಲೇ ಪ್ರತಿಯೊಬ್ಬರ ಬಳಿ
ತೆರಳಿ ಅಹವಾಲು ಕೇಳಿದರು.

ಹಿರಿಯರು-ಕಿರಿಯರು ಎಂಬ ಭೇದವೆಣಿಸದೇ ಎಲ್ಲರೊಂದಿಗೆ ಶಾಂತಚಿತ್ತರಾಗಿಯೇ ಮಾತನಾಡಿದ ಮುಖ್ಯಮಂತ್ರಿಗಳು, ಜನತಾ ದರ್ಶನದ ಮೊದಲ ಹಂತದಲ್ಲಿ ಸುಮಾರು ಎರಡೂವರೆ ಗಂಟೆಗಳ ಕಾಲ ಅಹವಾಲು ಆಲಿಸಿದರು. ದುಃಖ ತಡೆಯದೇ ಕಣ್ಣೀರು ಹಾಕಿದ ಮಹಿಳೆಯರು, ಅನೇಕ ವರ್ಷಗಳಿಂದ ನ್ಯಾಯ ಸಿಗದೇ ಕಚೇರಿಗಳಿಗೆ ಅಲೆದಾಡಿ ಸುಸ್ತಾದ ಜನರಿಗೆ ಸ್ವತಃ ಮುಖ್ಯಮಂತ್ರಿಗಳೇ ಎದುರು ನಿಂತು ಸಮಸ್ಯೆ ಕೇಳಿದಾಗ ಒಂದು ಕ್ಷಣ ದಿಗೂಢರಾದರು.

ಕೆಲವರು ಕೈ ಮುಗಿದು ನನಗೆ ಸಹಾಯ ಮಾಡಿ ನಿಮಗೆ ಉಪಕಾರವಾಗುತ್ತೆ ಎಂದರೆ, ಇನ್ನೂ ಕೆಲವರು ಮಾತಿನ ಮೂಲಕ ಹೇಳಲಾಗದೇ ಕಾಲು ಹಿಡಿಯಲು ಮುಂದಾದರು. ಅದಕ್ಕೆ ಆಸ್ಪದ ನೀಡದ ಸಿಎಂ, ನಿಮ್ಮ ಅಹವಾಲು ಕೇಳಲೆಂದೇ ಬಂದಿರುವೆ ಎಂದಾಗ ಹಿರಿಯಣ್ಣನ ಮುಂದೆ ಸಮಸ್ಯೆ ತೋಡಿಕೊಳ್ಳುವ ರೀತಿಯಲ್ಲಿ ತುಸು ಮುಜುಗರದಿಂದಲೇ ಅಹವಾಲು ಬಿಚ್ಚಿಟ್ಟರು.

ಅಹವಾಲು ಆಲಿಸುತ್ತಲೇ ಡೀಸಿ ಸೇರಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು. ಜನತಾ ದರ್ಶನದ ಮೊದಲ ಹಂತದಲ್ಲಿ ದಿವ್ಯಾಂಗರ ಅಹವಾಲುಗಳನ್ನು ಆಲಿಸಿದರು. ಸಂಜೆ 7 ಗಂಟೆಗೆ ಸುವರ್ಣ ವಿಧಾನಸೌಧದಲ್ಲಿ ಜನತಾ ದರ್ಶನ ಮುಂದುವರಿಸಿದರು.

Advertisement

ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಲು 1,271 ಜನರು ಹೆಸರು ನೋಂದಣಿ ಮಾಡಿಕೊಂಡಿದ್ದರು. ಇಷ್ಟುಜನರನ್ನು ನೇರವಾಗಿ ಮಾತನಾಡಿ, ಅಹವಾಲು ಹೇಗೆ ಸ್ವೀಕರಿಸುತ್ತಾರೆಂಬ ಪ್ರಶ್ನೆಗೆ ಮುಖ್ಯಮಂತ್ರಿಗಳ ತಾಳ್ಮೆಯೇ ಉತ್ತರವಾಗಿತ್ತು. ನೊಂದವರ ಕಣ್ಣೀರು ಒರೆಸುವ ಪ್ರಯತ್ನ ಮಾಡಿದ ಸಿಎಂ ಕೆಲವೊಂದು ಸಮಸ್ಯೆಗಳನ್ನು ಸ್ಥಳದÇÉೇ ಬಗೆಹರಿಸಿದರು. ಕೆಲವು ಮನವಿ ಪತ್ರಗಳಿಗೆ ಸಂಬಂಧಿಸಿದಂತೆ ತಕ್ಷಣ ಕ್ರಮ ವಹಿಸುವಂತೆ ಷರಾ ಬರೆದರು.

ಮುಖ್ಯಮಂತ್ರಿಯೇ ಸ್ವತಃ ಐದಾರು ಗಂಟೆಗಳ ಕಾಲ ನಿರಂತರವಾಗಿ ಅಹವಾಲು ಆಲಿಸುವುದನ್ನು ಕಂಡ ಜನರು ತಮ್ಮ ಸಮಸ್ಯೆಯನ್ನು ಅವರಿಗೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next