Advertisement

ಸಿಎಂ ಗ್ರಾಮವಾಸ್ತವ್ಯ; ಉಜಳಂಬದಲ್ಲಿ 32 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ

10:00 AM Jun 28, 2019 | Team Udayavani |

ಕಲಬುರಗಿ/ಬೀದರ್: ಬಸವಕಲ್ಯಾಣದ ಉಜಳಂಬ ಗ್ರಾಮದಲ್ಲಿ ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯಕ್ಕೂ ಮೊದಲು ಗುರುವಾರ ಬೆಳಗ್ಗೆ  32 ಕೋಟಿ ರೂಪಾಯಿ ವೆಚ್ಚದ  ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.

Advertisement

ಈ ಬಾರಿಯ ಬಜೆಟ್ ನಲ್ಲಿ   ಬೀದರ್ ಜಿಲ್ಲೆಯಲ್ಲಿ ವಿವಿಧ ನೀರಾವರಿ ಕಾಮಗಾರಿಗಳಿಗಾಗಿ ಸಣ್ಣ ನೀರಾವರಿ ಹಾಗೂ ಜಲಸಂಪನ್ಮೂಲ ಇಲಾಖೆಗೆ 800 ಹಂಚಿಕೆ ಮಾಡಲಾಗಿದೆ ಎಂದು ಜನಸಂಪರ್ಕ ಸಭೆಯಲ್ಲಿ ತಿಳಿಸಿದರು.

ಗೋದಾವರಿ ಬೇಸಿನ್ ನಿಂದ ಬೀದರ್ ಜಿಲ್ಲೆಗೆ 7.86 ಟಿಎಂಸಿ ನೀರು ಹಂಚಿಕೆಯಾಗಬೇಕಿದೆ  ಎಂದು ಮಾಹಿತಿ ಇದ್ದು ಈ ಕುರಿತು ನಿಖರವಾದ ಮಾಹಿತಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಘೋಷಿಸಲಾಗಿರುವ ಎಲ್ಲಾ ಕಾಮಗಾರಿಗಳನ್ನು ಆರಂಭಕ್ಕೆ ಮುಂದಿನ ಐದು ತಿಂಗಳಲ್ಲಿ ಚಾಲನೆ ನೀಡಲಾಗುವುದು. ಸಾಲಮನ್ನಾ ಯೋಜನೆಯಡಿ ಕಳೆದ ಎರಡು ವರ್ಷಗಳಲ್ಲಿ ಬೀದರ್ ಜಿಲ್ಲೆಯಲ್ಲಿ ಸಹಕಾರಿ ಬ್ಯಾಂಕುಗಳಲ್ಲಿ ಸಾವಿರದ 45 ಕೋಟಿ ರೂಪಾಯಿ ಸಾಲ ಮನ್ನಾ ಮಾಡಲಾಗಿದೆ ಎಂದು ಹೇಳಿದರು.

ರಾಷ್ಟ್ರೀಕೃತ  ಬ್ಯಾಂಕುಗಳಲ್ಲಿ 11,785 ರೈತರ 43 ಕೋಟಿ ರೂ ಸಾಲಮನ್ನಾ ಮಾಡಲಾಗಿದೆ. ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ.

Advertisement

ಲೋಕೋಪಯೋಗಿ ಇಲಾಖೆಗೆ 317 ಕೋಟಿ ರೂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ 89 ಕೋಟಿ ರೂ, ಪ/ಜಾತಿ ಪಂಗಡಗಳ ಅಭಿವೃದ್ಧಿಗೆ 50 ಕೋಟಿ ರೂ  ನೀಡಲಾಗಿದೆ ಎಂದರು.

ಮಾಂಜರಾ ಏತ ನೀರಾವರಿ ಮೂಲಕ 3ಟಿಎಂಸಿ ನೀರನ್ನು ಭಾಲ್ಕಿ ಹಾಗೂ ಬಸವಕಲ್ಯಾಣ ತಾಲೂಕಿನ ಕೆರೆಗಳನ್ನು ತುಂಬಿಸಲು  75 ಕೋಟಿ ರೂ ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಬೀದರ್ ಮೆಡಿಕಲ್ ಕಾಲೇಜು ಕಟ್ಟಡ ಕಳಪೆ ಕಾಮಗಾರಿ ಕುರಿತು ಹಲವಾರು ದೂರುಗಳು ಬಂದಿವೆ. ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯನ್ನು ಸಂಪೂರ್ಣವಾಗಿ ಸುಸಜ್ಜಿತ ಗೊಳಿಸಲು 150ರಿಂದ 200 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು.  ಬಜೆಟ್ ನಲ್ಲಿ ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 2,000 ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದರು.

ಗ್ರಾಮ ವಾಸ್ತವ್ಯದಲ್ಲಿ ಸ್ವೀಕರಿಸುವ ಎಲ್ಲಾ ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಲು  ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ಹೈದರಾಬಾದ್ ಕರ್ನಾಟಕದ ಎಲ್ಲಾ ಜಿಲ್ಲೆಗಳ ಶಾಲೆಗಳ ಸ್ಥಿತಿಗತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಕ್ರಮ ಕಐಗೂಳ್ಳಲಾಗುತ್ತಿದೆ.  ಪ್ರತಿ ಶಾಲೆಯ ಪರಿಸ್ಥಿತಿ,  ಕಟ್ಟಡಗಳು, ಶಿಕ್ಷಕರ ಕೊರತೆ ಇತ್ಯಾದಿ ಮಾಹಿತಿಗಳನ್ನು ಒಂದು ವಾರದೊಳಗಾಗಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next