Advertisement

ಸಿಎಂ ಕಚೇರಿಗೆ 450 ಸಿಬ್ಬಂದಿ

06:00 AM Oct 15, 2018 | |

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದ ತಕ್ಷಣ ಸರ್ಕಾರದಲ್ಲಿನ ಆಡಳಿತ ವ್ಯವಸ್ಥೆಯಲ್ಲಿ ದುಂದು ವೆಚ್ಚಕ್ಕೆ ಕತ್ತರಿ ಹಾಕುವುದಾಗಿ ಹೇಳಿದ್ದರು. ಅದನ್ನು ತಮ್ಮ ಇಲಾಖೆಯಿಂದಲೇ ಜಾರಿಗೆ ತರಲಾಗುವುದು ಎಂದು ಹೇಳಿದ್ದರು. ಆದರೆ, ಮುಖ್ಯಮಂತ್ರಿ ಸಚಿವಾಲಯಕ್ಕೆ 450 ಸಿಬ್ಬಂದಿ ನೇಮಕ ಮಾಡಿಕೊಳ್ಳುವ ಮೂಲಕ ಅನಗತ್ಯ ದುಂದುವೆಚ್ಚಕ್ಕೆ ತಾವೇ ಮುನ್ನುಡಿ ಬರೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಚ್ಚರಿ ಎಂದರೆ ರಾಜ್ಯದ ಇತಿಹಾಸದಲ್ಲೇ ಇದೇ ಮೊದಲು ಸಿಎಂ ಕಚೇರಿಗೆ ಭಾರೀ ಪ್ರಮಾಣದಲ್ಲಿ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗಿದೆ.

Advertisement

ಆರ್‌ಟಿಐ ಕಾರ್ಯಕರ್ತ ಬಿ.ಎಸ್‌.ಗೌಡ ಅವರಿಗೆ ಸಿಎಂ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ, ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು 4 ತಿಂಗಳಲ್ಲಿ ಸಿಎಂ ಸಚಿವಾಲಯಕ್ಕೆ ಬಿ,ಸಿ ಮತ್ತು ಡಿ ದರ್ಜೆಯ 450 ಸಿಬ್ಬಂದಿ ನೇಮಿಸಿಕೊಳ್ಳಲಾಗಿದೆ. ಸುಮಾರು 200 ಸಿಬ್ಬಂದಿ ಸರ್ಕಾರದ ಬೇರೆ, ಬೇರೆ ಇಲಾಖೆಗಳಿಂದ ಸಿಎಂ ಕಚೇರಿಗೆ ನಿಯೋಜನೆ ಮಾಡಲಾಗಿದೆ. ಉಳಿದ 250 ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲೆ ಖಾಸಗಿ ಕಂಪನಿ ಮೂಲಕ ನೇಮಕ ಮಾಡಿಕೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next