Advertisement

ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಿಧನ

12:09 PM Aug 22, 2022 | Team Udayavani |

ಬೆಂಗಳೂರು: ಸಿಎಂ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ (45) ಅವರು ಸೋಮವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದರು.

Advertisement

ಗುರುಲಿಂಗಸ್ವಾಮಿ ಸೋಮವಾರ ಮುಂಜಾನೆ ಜಿಮ್​ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.

ಗುರುಲಿಂಗ ಸ್ವಾಮಿ ಕನ್ನಡದ ಹಲವು ಪತ್ರಿಕೆಗಳಲ್ಲಿ ಮತ್ತು ಸುದ್ದಿವಾಹಿನಿಗಳಲ್ಲಿ ಸೇವೆ ಸಲ್ಲಿಸಿದ್ದರು.   ಬೆಂಗಳೂರು ಮತ್ತು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.

ಗುರುಲಿಂಗಸ್ವಾಮಿ ನಿಧನಕ್ಕೆ ಮುಖ್ಯಮಂತ್ರಿ, ಹೆಚ್‌ ಡಿಕೆ ಸೇರಿದಂತೆ ಸಚಿವ ಸಂಪುಟದ ಸದಸ್ಯರು ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next