Advertisement

ಹಣಕಾಸು ಸಚಿವೆ ಭೇಟಿ ಮಾಡಿದ ಮುಖ್ಯಮಂತ್ರಿ : ಜಿಎಸ್ ಟಿ ಪರಿಹಾರ ಬಿಡುಗಡೆಗೆ ಮನವಿ

01:27 PM Jul 31, 2021 | Team Udayavani |

ನವದೆಹಲಿ : ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

Advertisement

ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಕುರಿತು ಚರ್ಚಿಸಿದರು.

ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಅಡಚಣೆ ಎದುರಾಗಿರುವುದರಿಂದ ಇದನ್ನು ಕೂಡಲೇ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಇದನ್ನೂ ಓದಿ :ಲಾಕ್‌ಡೌನ್‌ನಲ್ಲಿ ಮಕ್ಕಳಿಗೆ ಅಕ್ಷರ ಅಭ್ಯಾಸ| ­ಯುವಕರ ನಿಸ್ವಾರ್ಥ ಸೇವೆಗೆ ಸಲಾಂ

ಇದಲ್ಲದೆ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅಗತ್ಯವಿರುವ ಅನುದಾನ ಬಿಡುಗಡೆಯ ಕುರಿತೂ ಸಹ ಕೇಂದ್ರ ಸಚಿವರ ಗಮನಸೆಳೆದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next