Advertisement

ಪ್ರಧಾನಿ ಭೇಟಿ ಹಿನ್ನೆಲೆ ಸಿಎಂ ಸಭೆ

07:52 PM Oct 20, 2022 | Team Udayavani |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್‌ 11ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ  ಟರ್ಮಿನಲ್‌-2ರ ಉದ್ಘಾಟನೆ ಹಾಗೂ ವಿಮಾನ ನಿಲ್ದಾಣದ ಬಳಿ ನಿರ್ಮಿಸಲಾಗಿರುವ 108 ಅಡಿ ಎತ್ತರದ ನಾಡಪ್ರಭು ಕೇಂಪೇಗೌಡರ ಕಂಚಿನ ಪ್ರತಿಮೆ ಅನಾವರಣಗೊಳಿಸಲಿದ್ದು, ಈ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಪೂರ್ವಭಾವಿ ಸಭೆ ನಡೆಸಿದರು.

Advertisement

ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಹಾಗೂ ಸಂಚಾರ ವ್ಯವಸ್ಥೆಗೆ ಯಾವುದೇ ತೊಡಕು ಆಗದಂತೆ ಕಾರ್ಯಕ್ರಮ ಆಯೋಜಿಸುವಂತೆ ಸಭೆಯಲ್ಲಿ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದಕ್ಕೆ ಪೂರ್ವಭಾವಿಯಾಗಿ ಎಲ್ಲ ಜಿಲ್ಲೆಗಳ ಪವಿತ್ರ ಮೃತ್ತಿಕೆಯನ್ನು ಸಂಗ್ರಹಿಸುವ “ಬನ್ನಿ ನಾಡ ಕಟ್ಟೋಣ’ ಎಂಬ ಅಭಿಯಾನ ಪ್ರಾರಂಭವಾಗಲಿದೆ. ಈ ಅಭಿಯಾನ ಯಶಸ್ವಿಗೊಳಿಸಲು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳ ನೇತೃತ್ವದಲ್ಲಿ, ತಾಲ್ಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿಗಳು, ಗ್ರಾಮಲೆಕ್ಕಾಧಿಕಾರಿಗಳು ಮತ್ತು ಪಿಡಿಒಗಳ ಸಹಕಾರ ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಮೃತ್ತಿಕೆ ಸಂಗ್ರಹಿಸಲು 20 ವಾಹನಗಳನ್ನು ವ್ಯವಸ್ಥೆಗೊಳಿಸಲಾಗಿದ್ದು 15 ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ, ಮೃತ್ತಿಕೆ ಸಂಗ್ರಹಿಸಲಾಗುವುದು ಎಂದು ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ಸಭೆಯಲ್ಲಿ ಸಚಿವರಾದ ಆರ್‌.ಅಶೋಕ, ಡಾ. ಸಿ.ಎನ್‌. ಅಶ್ವತ್ಥ ನಾರಾಯಣ, ಡಾ. ಕೆ. ಸುಧಾಕರ್‌, ಬಿ. ಎ. ಬಸವರಾಜ, ಕೆ. ಗೋಪಾಲಯ್ಯ, ಕೆ.ಸಿ. ನಾರಾಯಣ ಗೌಡ, ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಕೃಷ್ಣಪ್ಪ, ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಭಾಗವಹಿಸಿದ್ದರು.

Advertisement

ಪ್ರಧಾನ ಮಂತ್ರಿಗಳ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪೂರ್ವಭಾವಿ ಸಭೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next