Advertisement

31ಕ್ಕೆ ಸದಾಶಿವ ಆಯೋಗದ ವರದಿ ಕುರಿತು ಸಿಎಂ ಸಭೆ 

07:30 AM Dec 21, 2017 | Team Udayavani |

ಬೆಂಗಳೂರು: ಪರಿಶಿಷ್ಟ ಜಾತಿ ಮೀಸಲು ಕುರಿತಂತೆ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಕುರಿತು ಚರ್ಚಿಸಲು ಡಿ. 31ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ನಾಯಕರ ಸಭೆ ಕರೆದಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ ಹೇಳಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಡಿ. 31ರಂದು ಬೆಳಗ್ಗೆ 10 ಗಂಟೆಗೆ ಸಭೆ ಕರೆಯಲಾಗಿದ್ದು, ಸಭೆಗೆ ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ಸಚಿವರಾದ ಡಾ.ಎಚ್‌.ಸಿ.ಮಹದೇವಪ್ಪ, ರುದ್ರಪ್ಪ ಲಮಾಣಿ, ಆರ್‌.ಬಿ.ತಿಮ್ಮಾಪುರ್‌, ಸಂಸದ ಕೆ.ಎಚ್‌.ಮುನಿಯಪ್ಪ ಮತ್ತು ತಮ್ಮನ್ನು ಮುಖ್ಯಮಂತ್ರಿಗಳು ಆಹ್ವಾನಿಸಿದ್ದಾರೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next