Advertisement

ಮಳೆ ಅನಾಹುತ ತಡೆ ಕುರಿತು ನಾಳೆ ಸಿಎಂ ಸಭೆ

12:33 PM Jun 03, 2018 | Team Udayavani |

ಬೆಂಗಳೂರು: ನಗರದಲ್ಲಿ ಮಳೆಯಿಂದ ಉಂಟಾಗುವ ಪ್ರವಾಹ, ಅನಾಹುತಗಳನ್ನು ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಕಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಜೂ.4ರಂದು ಅಧಿಕಾರಿಗಳ ಸಭೆ ಕರೆದಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಳೆಯಿಂದ ಉಂಟಾಗುವ ತೊಂದರೆ ತಪ್ಪಿಸಿ ರಾಜಕಾಲುವೆ ಒತ್ತುವರಿ ತೆರವುಗೊಳಿಸಬೇಕಿದೆ.

Advertisement

ಈ ಕುರಿತು ಚರ್ಚಿಸಲು ಜೂ.4ರಂದು ಬಿಬಿಎಂಪಿ, ಬಿಡಿಎ, ಜಲಮಂಡಳಿ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಹೇಳಿದರು. ಬೆಂಗಳೂರಿನಲ್ಲಿ ಮಳೆ ಬಂದರೆ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನನಗೆ ಗೊತ್ತಿದೆ. ಮಳೆಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next