Advertisement

ಕಾವೇರಿ: ಇಂದು ಸಂಸದರ ಜತೆ ಸಿಎಂ ಸಭೆ

11:45 AM Mar 16, 2018 | Team Udayavani |

ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶದ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಶುಕ್ರವಾರ ದಿಲ್ಲಿಯಲ್ಲಿ ರಾಜ್ಯ ಸಂಸದರ ಸಭೆ ಕರೆದಿದ್ದಾರೆ. ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ದಿಲ್ಲಿಗೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಜೆ ರಾಜ್ಯದ ಸಂಸದರು, ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರ ಜತೆ ಸಭೆ ನಡೆಸಲಿದ್ದು, ಸು. ಕೋರ್ಟ್‌ ಆದೇಶದಂತೆ ಕೇಂದ್ರ ಸರಕಾರ 6 ವಾರದಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಮುಂದಾಗಿದ್ದು, ಇದರಿಂದ ರಾಜ್ಯಕ್ಕೆ ಅನ್ಯಾಯ ವಾಗಲಿದೆ ಎನ್ನುವುದನ್ನು ಕೇಂದ್ರಕ್ಕೆ ಮನವರಿಕೆ ಮಾಡಿಕೊಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next