Advertisement

ಪ್ರಾಕೃತಿಕ ವಿಕೋಪ ಹಿನ್ನೆಲೆ ಅಧಿಕಾರಿಗಳೊಂದಿಗೆ ಸಿಎಂ ಸಭೆ

12:26 PM Jul 15, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆ ಹಾನಿಗೊಳಗಾದ ಜಿಲ್ಲೆಗಳ ಕುರಿತು ಶುಕ್ರವಾರ ಮಧ್ಯಾಹ್ನ 1:30 ಕ್ಕೆ ದೇವನಹಳ್ಳಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಕರೆದಿದ್ದಾರೆ.

Advertisement

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಹಾಸನ, ಬೀದರ, ಬೆಳಗಾವಿ, ಕಲಬುರಗಿ, ಮೈಸೂರು, ಹಾವೇರಿ, ಧಾರವಾಡ, ದಾವಣಗೆರೆ, ಯಾದಗಿರಿ, ಬಾಗಲಕೋಟ, ವಿಜಯಪುರ, ರಾಯಚೂರು, ವಿಜಯನಗರ, ಚಾಮರಾಜನಗರ, ಮಂಡ್ಯ, ಬಳ್ಳಾರಿ ಜಿಲ್ಲೆಯ ಅಧಿಕಾರಿಗಳು ಜಿಲ್ಲಾಧಿಕಾರಿ, ಸಿಎಒ, ಎಸ್ಪಿಗಳೊಂದಿಗೆ ಸಿಎಂ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಹೌದ್ದೋ ಹುಲಿಯಾ… ಮತ್ತೆ ನೀನಾ ಸಿ.ಎಂ: ಸಿದ್ದರಾಮಯ್ಯ ಪರ ಅಭಿಮಾನಿಗಳಿಂದ ಘೋಷಣೆ

ಹಲವು ಜಿಲ್ಲೆಗಳಲ್ಲಿ ನಿರಂತವಾಗಿ ಮಳೆ ಸುರಿಯುತ್ತಿದ್ದು, ಮಳೆ ಮತ್ತು ಹಾನಿಯ ಬಗ್ಗೆ ಅಧಿಕಾರಿಗಳೊಂದಿದೆ ಚರ್ಚಿಸಲಿದ್ದು, ಸಂಬಂಧಿಸಿದ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next