Advertisement

ತೈವಾನ್‌ ಕಂಪನಿ ಮುಖ್ಯಸ್ಥರಿಂದ ಸಿಎಂ ಭೇಟಿ

07:09 AM Jun 20, 2019 | Lakshmi GovindaRaj |

ಬೆಂಗಳೂರು: ತೈವಾನ್‌ ಮೂಲದ ವಿಸ್ಟ್ರಾನ್‌ ಕಾರ್ಪೋರೇಷನ್‌ ಕಂಪನಿಯ ನಿರ್ದೇಶಕ ವಿ.ಲೀ.ನೇತೃತ್ವದ ನಿಯೋಗ ಬುಧವಾರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿತು.

Advertisement

ಕೋಲಾರದ ನರಸಾಪುರದಲ್ಲಿ ಆರಂಭಿಸಲು ಉದ್ದೇಶಿಸಿರುವ 650 ಕೋಟಿ ರೂ.ಬಂಡವಾಳ ಹೂಡಿಕೆಯ ಮಾಹಿತಿ ಹಾಗೂ ಸಂವಹನ ತಂತ್ರಜ್ಞಾನಗಳ ಉತ್ಪನ್ನಗಳ ಕಂಪನಿಗೆ ಈಗಾಗಲೇ 40 ಎಕರೆ ಜಮೀನನ್ನು ಸರ್ಕಾರ ಮಂಜೂರು ಮಾಡಿದ್ದು, ಬಾಕಿ 3 ಎಕರೆ ಜಮೀನು ಮಂಜೂರು ಮಾಡುವಂತೆ ಲೀ ಅವರು ಮನವಿ ಮಾಡಿದರು.

ವಿಸ್ಟ್ರಾನ್‌ ಕಂಪನಿಯ ಒಂದು ಘಟಕ ಪೀಣ್ಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, 1,500 ಜನರಿಗೆ ಉದ್ಯೋಗ ನೀಡಿದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿ ದೃಷ್ಟಿಯಿಂದ ಸರ್ಕಾರದ ವತಿಯಿಂದ ಕಂಪನಿಗೆ ಎಲ್ಲ ಸಹಕಾರ ನೀಡುವ ಭರವಸೆಯನ್ನು ಮುಖ್ಯಮಂತ್ರಿ ನೀಡಿದರು.

ಕಂಪನಿಯ ಸ್ಥಳೀಯ ನಿರ್ದೇಶಕ ಸೆಂಥಿಲ್‌ಕುಮಾರ್‌, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ವಿಸ್ಟ್ರಾéನ್‌ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ಮಂಜುನಾಥ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next