Advertisement
ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯವ್ಯಯ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನೆ ನಡೆಸಿ, ರಾಜ್ಯದಲ್ಲಿ ಸಾಮಾನ್ಯ ರೊಇಗ ರುಜಿನೆಗಳಿಗೆ ಉತ್ತಮ ಚಿಕಿತ್ಸೆ ನೀಡುವ ಉದ್ದೇಶದ ಒಟ್ಟು 438 ನಮ್ಮ ಕ್ಲಿನಿಕ್ ಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಿ ಎಂದು ಸಲಹೆ ನೀಡಿದರು.
Related Articles
Advertisement
ನಿಮ್ಹಾನ್ಸ್ ಸಹಯೋಗದಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಜಾರಿಗೊಳಿಸುತ್ತಿರುವ ಮೆದುಳಿನ ಆರೋಗ್ಯ ಕಾರ್ಯಕ್ರಮವನ್ನು ಧಾರವಾಡದ ಡಿಮ್ಹಾನ್ಸ್ ಸಹಯೋಗದಲ್ಲಿ ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿಯೂ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಇಲಾಖೆಯ ಇತರ ಯೋಜನೆಗಳನ್ನು ಸಹ ನಿಗದಿತ ಕಾಲಾವಧಿಯಲ್ಲಿ ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐ.ಎಸ್.ಎನ್. ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಆಯುಕ್ತ ರಂದೀಪ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಾದ ಅರುಂಧತಿ ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು.