Advertisement

ತಿದ್ದುಪಡಿ ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚನೆ

11:14 PM Oct 23, 2019 | Team Udayavani |

ಬೆಂಗಳೂರು: ಪದವೀಧರ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳ ಸಮಗ್ರ ತಿದ್ದುಪಡಿಗೆ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

Advertisement

ಈ ಕುರಿತು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಮನವಿಯಂತೆ ಪದವೀಧರ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಹಲವು ನ್ಯೂನತೆಗಳಿದ್ದು, ಅವುಗಳನ್ನು ಸರಿಪಡಿಸಿ, ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ ಪದವೀಧರ ಶಿಕ್ಷಕರಿಗೆ ಅನುಕೂಲ ಮಾಡಿಕೊಡಲು ಮನವಿ ಸಲ್ಲಿಸಿದ್ದಾರೆ. ಅದರಂತೆ ಕೂಡಲೇ ಈ ಕುರಿತು ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸಿ ಎಂದು ಪತ್ರದಲ್ಲಿ ಮುಖ್ಯಮಂತ್ರಿಯವರು ನಿರ್ದೇಶನ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next