Advertisement

ಪ್ರತಿ ಕಂದಾಯ ವಿಭಾಗಗಳಲ್ಲಿ ಹೊಸ ಆರ್ ಟಿಸಿ ಆಗಸ್ಟ್ ಒಳಗೆ ವಿತರಿಸಲು ಸಿಎಂ ಸೂಚನೆ

09:40 PM May 06, 2022 | Team Udayavani |

ಬೆಂಗಳೂರು: ರಾಜ್ಯದ ಎಲ್ಲಾ ಕಂದಾಯ ವಿಭಾಗಗಳ ತಲಾ 100 ಗ್ರಾಮಗಳಲ್ಲಿ ಹೊಸ ಆರ್.ಟಿ.ಸಿಗಳನ್ನು ಆಗಸ್ಟ್ ಮಾಹೆಯೊಳಗೆ ವಿತರಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

Advertisement

2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸಭೆಯ ಮುಖ್ಯಾಂಶಗಳು
1. ಕೃಷಿ ಜಮೀನು ಮತ್ತು ಇತರೆ ಸ್ವತ್ತುಗಳ ಡ್ರೋನ್ ಆಧಾರಿತ ಸರ್ವೆ ಕಾರ್ಯವನ್ನು ಕೈಗೊಂಡು ದಾಖಲೆಗಳ ಡಿಜಿಟಲೀಕರಣವಾಗಬೇಕು. ಪೋಡಿ ಕೆಲಸಗಳು ಸೂಕ್ತವಾಗಿ ಆಗಬೇಕು.

2. ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಡಿ 59.45 ಲಕ್ಷ ಫಲಾನುಭವಿಗಳಿಗೆ ನೀಡುತ್ತಿರುವ ಮಾಶಾಸನ ಹೆಚ್ಚಳವಾಗಿದೆ. ಅವಿವಾಹಿತ, ವಿಚ್ಛೇದಿತ ಮಹಿಳೆಯರಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ 1.32 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ. ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ಉತ್ತಮ ಕೆಲಸವಾಗಿರುವ ಬಗ್ಗೆ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

3. ಆರ್.ಟಿ.ಸಿ ಗಳನ್ನು ಅಧಿಕೃತವಾಗಿ ನೀಡದಿದ್ದರೆ ವ್ಯಾಜ್ಯಗಳು ಬಗೆಹರಿಯುವುದಿಲ್ಲ. ಈ ಬಗ್ಗೆ ಪರಿಶೀಲನಾ ಕಾರ್ಯವನ್ನು ಹಂತ ಹಂತವಾಗಿ ಮಾಡಬೇಕು. ಭೂ ವಿವಾದಗಳ ಪ್ರಕರಣಗಳಿಂದ ಜನರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಸೂಕ್ತ ಗಮನ ಹರಿಸಬೇಕು.

Advertisement

4. ಬದಲಾದ ಸನ್ನಿವೇಶದಲ್ಲಿ ಬದಲಾದ ಆಡಳಿತ ವ್ಯವಸ್ಥೆ ಇರಬೇಕು. ಹಳೆ ವ್ಯವಸ್ಥೆಯಲ್ಲಿ ಪ್ರತಿದಿನಕ್ಕೆ 3-4 ನೋಂದಣಿಯಾಗುತ್ತದೆ.

5. ರಾಜ್ಯದ ಪ್ರತಿ ವಿಭಾಗದಲ್ಲಿ 4 ಅಥವಾ 5 ತಾಲ್ಲೂಕಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಕೈಗೊಳ್ಳಲು ಸೂಚಿಸಿದರು.

6. ಸಾರ್ವಜನಿಕರಿಗೆ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಬೆಂಗಳೂರಿಗೆ ಹೆಚ್ಚಿನ ಉಪನೋಂದಣಾಧಿಕಾರಿಗಳ ಕಚೇರಿಯನ್ನು ಸ್ಥಾಪಿಸುವ ಬಗ್ಗೆ ಕ್ರಮ ವಹಿಸಬೇಕು.

7. ಎಲ್ಲಾ ಪಾರಂಪರಿಕ ನೋಂದಾಯಿತ ಶಾಶ್ವತ ದಾಖಲೆಗಳ ಆಧುನೀಕರಣ ಆಗಬೇಕು.

8. ಪಂಡರಾಪುರದಲ್ಲಿ 7.50 ಕೋಟಿ ರೂ.ಗಳ ವೆಚ್ಚದಲ್ಲಿ ಅತಿಥಿಗೃಹ ನಿರ್ಮಾಣದಲ್ಲಿ ಕರ್ನಾಟಕದ ಸ್ಥಳ ಲಭ್ಯವಿದ್ದು, ಡಾರ್ಮಿಟರಿಗಳನ್ನು ಕಟ್ಟಲು ಹೆಚ್ಚಿನ ಆದ್ಯತೆ ನೀಡುವುದು. ಪ್ರಸ್ತಾವನೆ ಮರು ಯೋಜಿಸಿ ಜುಲೈ 2 ರೊಳಗೆ ಶಂಕುಸ್ಥಾಪನೆ ನೆರವೇರಿಸಲು ಕ್ರಮ ವಹಿಸುವುದು.

8. ಸಣ್ಣ ತಾಲ್ಲೂಕುಗಳಿಗೆ ಮಿನಿವಿಧಾನಸೌಧ ವಿನ್ಯಾಸಗೊಳಿಸುವಾಗ ಅಗತ್ಯವಿರುವ ಇಲಾಖೆಗಳನ್ನು ಗಮನದಲ್ಲಿ ಇಟ್ಟುಕೊಳ್ಳುವುದು. ಲಭ್ಯವಿರುವ ಸ್ಥಳಗಳ ಪಟ್ಟಿ ನೀಡುವುದು ಹಾಗೂ ಎರಡು ವರ್ಷಗಳ ಅವಧಿಗೆ ಕಟ್ಟಡ ನಿರ್ಮಾಣ ಪೂರ್ಣಗೊಳ್ಳಬೇಕು. ಪ್ರಮುಖ ಇಲಾಖೆಗಳು ಕಟ್ಟಡದಲ್ಲಿ ಕಾರ್ಯನಿರ್ವಹಿಸಬೇಕು.

Advertisement

Udayavani is now on Telegram. Click here to join our channel and stay updated with the latest news.

Next