Advertisement
ಲಾಕ್‌ಡೌನ್ ಅನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು. ಬೆಳಗ್ಗೆಯಿಂದ ರಾತ್ರಿವರೆಗೂ ಅಗತ್ಯ ವಸ್ತುಗಳ ಅಂಗಡಿ ತೆರೆಯುವ ಮೂಲಕ ಜನಸಂದಣಿಯಾಗದಂತೆ ಎಚ್ಚರ ವಹಿಸಬೇಕು. ಕೋವಿಡ್-19ಗೆ ಚಿಕಿತ್ಸೆ ನೀಡುವ ಆರೋಗ್ಯ ಇಲಾಖೆ ಸಿಬಂದಿಗೆ ಅಗತ್ಯವಾಗಿರುವ ಆಹಾರ, ಕುಡಿಯುವ ನೀರು, ವಸತಿ ಸೌಲಭ್ಯ ಒದಗಿಸಿ ಎಂದು ಆದೇಶ ನೀಡಿದರು.
ಕ್ಯಾಂಪ್‌ನಲ್ಲಿರುವ ಕಾರ್ಮಿಕರಿಗೆ ಅಗತ್ಯ ವ್ಯವಸ್ಥೆ, ಅವರ ಆರೋಗ್ಯ ತಪಾಸಣೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ ಅವರು ಅಗತ್ಯ ವೈದ್ಯಕೀಯ ಉಪಕರಣ, ವಸ್ತುಗಳನ್ನು ಎಸ್‌ಡಿಆರ್‌ಎಫ್ ಅಡಿ ಖರೀದಿಸಬಹುದು ಎಂದು ಸಲಹೆ ನೀಡಿದರು. ಮೈಸೂರು, ಬೀದರ್, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಬಳ್ಳಾಪುರ ಮೊದಲಾದ ಕಡೆಗಳಲ್ಲಿ ಬಿಗಿ ಕ್ರಮಗಳನ್ನು ಕೈಗೊಂಡು ಎ.14 ರ ಒಳಗೆ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಒತ್ತಡಕ್ಕೆ ಮಣಿಯದೆ ಜನಪ್ರತಿನಿಧಿಗಳ ಮೂಲಕ ಮನವೊಲಿಸಿ, ಎಲ್ಲ ಸಮುದಾಯಗಳ ಸಹಯೋಗದಿಂದ ಕಾರ್ಯ ನಿರ್ವಹಿಸಬೇಕು. ನಿಜವಾಗಿಯೂ ಬಡವರಿದ್ದು, ಪಡಿತರ ಚೀಟಿ ಇನ್ನೂ ಪಡೆಯದೆ ಇದ್ದರೆ, ದಾನಿಗಳ ನೆರವಿನಿಂದ ಆಹಾರ ಧಾನ್ಯ ವಿತರಿಸಲು ವ್ಯವಸ್ಥೆ ಮಾಡಬೇಕು. ಯಾರೂ ಹಸಿವಿನಿಂದ ಬಳಲದಂತೆ ಎಚ್ಚರ ವಹಿಸುವಂತೆ ಸಿಎಂ ತಿಳಿಸಿದರು.
Related Articles
Advertisement