Advertisement

ಗಲಭೆಯಲ್ಲಿಆಸ್ತಿ ಪಾಸ್ತಿ ನಾಶ ಮಾಡಿದವರ ವಿರುದ್ದ ಬಿಗಿ ಕ್ರಮಕ್ಕೆ ಸಿಎಂ ಸೂಚನೆ: ಬೊಮ್ಮಾಯಿ

02:29 PM Aug 18, 2020 | keerthan |

ಬೆಂಗಳೂರು: ಡಿಜೆ.ಹಳ್ಳಿ ಗಲಭೆಯಲ್ಲಿ ಭಾಗಿಯಾಗಿ ಆಸ್ತಿ ಪಾಸ್ತಿ ನಾಶ ಮಾಡಿದವರ ವಿರುದ್ದ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗಿನ ಸಭೆ ಬಳಿಕ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿಗಳು, ಅಡ್ವೋಕೇಟ್ ಜನರಲ್ ಸೇರಿದಂತೆ ಗೃಹ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು. ಡಿಜೆ. ಹಳ್ಳಿ, ಕೆ.ಜೆ ಹಳ್ಳಿ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳು ಮಾಹಿತಿ ಪಡೆದರು. ಗಲಭೆಕೋರರಿಂದಲೇ ನಷ್ಟ ಭರಿಸುವ ಬಗ್ಗೆ ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಕ್ಲೇಮ್ ಕಮಿಷನರ್ ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಎಸ್ಐಟಿ ತನಿಖೆ ವೇಳೆ ಗೂಂಡಾ ಕಾಯ್ದೆಯಲ್ಲಿ ಯಾರು ಇರ್ತಾರೆ, ಅಂಥವರ ವಿರುದ್ದ ಗೂಂಡಾ ಕಾಯ್ದೆ ಮೂಲಕ ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು. ಗೂಂಡಾ ಕಾಯ್ದೆಯಡಿ ಯಾರನ್ನೆಲ್ಲಾ ಬಂಧಿಸಬಹುದೋ ಅವರನ್ನು ಬಂಧಿಸಿ ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಬಿಎಸ್ ವೈ ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಎಲ್ಲಿದೆ ಆ್ಯಂಬುಲೆನ್ಸ್? ಡಿಕೆ ಶಿವಕುಮಾರ್ ಗುಡುಗು

ಗಲಭೆಯಲ್ಲಿ ಪಾಲ್ಗೊಂಡ ಆರೋಪಿಗಳ ಹಿನ್ನೆಲೆ ಪರಿಶೀಲಿಸಲಾಗುತ್ತಿದೆ. ಆರೋಪಿಗಳಿಗೆ ಯಾವ ಸಂಘಟನೆಗಳ ಜತೆ ಸಂಪರ್ಕವಿದೆ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ. ಪ್ರಕರಣವನ್ನು ಬೇರೆ ತನಿಖೆಗೆ ವಹಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

Advertisement

ಗೋಲಿಬಾರ್ ಪ್ರಕರಣವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ತನಿಖೆ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆ ಗಲಭೆ ಬಗ್ಗೆ ತನಿಖೆ ನಡೆಸುತ್ತಿದೆ. ಸದ್ಯ ಈ ಎರಡು ತನಿಖೆಗಳಿಗೆ ಸರ್ಕಾರದ ಬದ್ಧವಾಗಿದೆ. ಗಲಭೆಗೆ ಸಂಬಂಧಪಟ್ಟಂತೆ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಷ್ಟೇ ತನಿಖೆ ನಡೆಯುತ್ತಿದೆ. ಇದನ್ನು ಹೊರತು ಪಡಿಸಿ ಬೇರೆ ಯಾವುದೇ ತನಿಖೆ ನಡೆಯುತ್ತಿಲ್ಲ ಎಂದು‌ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next