ನವದೆಹಲಿ: ನೀರಾವರಿ ವಿಷಯ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಗೆ ಆಗಮಿಸಿದರು.
ಇಂದು ಸಂಜೆ 4 ಗಂಟೆ ಸಮಯದಲ್ಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ನಾಳೆ ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಮಾಂಡವಿಯ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ನೀಡುತ್ತಿರುವ ಲಸಿಕೆ ಪ್ರಮಾಣ ಹೆಚ್ಚಿಸುವಂತೆ ಮನವಿ ಮಾಡಲಾಗುವುದು ಎಂದರು.
ಇಂದು ಕೃಷಿ ಸಚಿವರನ್ನು ಭೇಟಿಯಾಗಿ ಸೆ.5 ರಂದು ಕೃಷಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವುದರ ಕುರಿತು ಚರ್ಚಿಸುತ್ತೇನೆ ಎಂದರು.
ಇನ್ನು ಮೈಸೂರು ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ವಿದ್ಯಾರ್ಥಿನಿ ಹೇಳಿಕೆ ಮೇಲೆ ದೂರು ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸೂಚನೆ ನೀಡಿದ್ದಾಗಿ ತಿಳಿಸಿದರು.
ಇನ್ನು ಇಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಬೊಮ್ಮಾಯಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಉಪಸ್ಥಿತರಿದ್ದರು .