Advertisement

ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬೊಮ್ಮಾಯಿ

11:45 AM Aug 09, 2021 | Team Udayavani |

ಮೈಸೂರು : ಮೈಸೂರಿನ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು(ಸೋಮವಾರ, ಆಗಸ್ಟ್ 9) ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ.

Advertisement

ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ನಾಡದೇವತೆಯ ದರ್ಶನ ಪಡೆಯಲು ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಪೂರ್ಣ ಕುಂಭ ಸ್ವಾಗತ ಮಾಡಲಾಯಿತು. ತದನಂತರ ದೇವಿಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.

ಇದನ್ನೂ ಓದಿ :   ರಾಹುಲ್ ರ ಟ್ವೀಟರ್ ಖಾತೆಯನ್ನು ಬ್ಲಾಕ್ ಮಾಡಬಹುದು, ಅವರ ಜನ ಪರ ಧ್ವನಿಯನ್ನಲ್ಲ: ಕಾಂಗ್ರೆಸ್

ಮೈಸೂರಿನಲ್ಲಿಂದು ಸಿಎಂ ಪ್ರವಾಸ :

ಮೈಸೂರಿನ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಸಚಿವರುಗಳಾದ  ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಡಾ. ಕೆ. ಸುಧಾಕರ್, ನಾರಾಯಣಗೌಡ, ಮುನಿರತ್ನ, ಗೋಪಾಲಯ್ಯ ಸಾಥ್ ನೀಡಿದ್ದರು.

Advertisement

ಮುಖ್ಯಮಂತ್ರಿ ಹಾಗೂ ಅವರ ಟೀಮ್ ದೇವಿಯ ಆಶೀರ್ವಾದ ಪಡೆದ ಬಳಿಕ  ಕೋವಿಡ್ ನಿರ್ವಹಣೆ ಕುರಿತಂತೆ  ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಆ ಬಳಿಕ ಮುಖ್ಯಮಂತ್ರಿಗಳು ಸಚಿವರುಗಳೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :  ರಾಹುಲ್ ರ ಟ್ವೀಟರ್ ಖಾತೆಯನ್ನು ಬ್ಲಾಕ್ ಮಾಡಬಹುದು, ಅವರ ಜನ ಪರ ಧ್ವನಿಯನ್ನಲ್ಲ: ಕಾಂಗ್ರೆಸ್

Advertisement

Udayavani is now on Telegram. Click here to join our channel and stay updated with the latest news.

Next