Advertisement

ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಿಎಂ ಆದೇಶ

09:16 PM Jul 20, 2021 | Team Udayavani |

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.

Advertisement

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಕ್ಷರಿ ಅವರು ಮಾಡಿಕೊಂಡ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿಗಳು ತಕ್ಷಣ ಹಿಂದಿನ ಬಾಕಿಯೂ ಸೇರಿ ಶೇ.11 ತುಟ್ಟಿ ಭತ್ಯೆಯನ್ನು ಜುಲೈ 1ರಿಂದ ಅನ್ವಯವಾಗುವಂತೆ ಬಿಡುಗಡೆ ಮಾಡಲು ಆದೇಶಿಸಿದ್ದಾರೆ.

ರಾಜ್ಯ ಸರ್ಕಾರದ ಈ ಆದೇಶದಿಂದ 6 ಲಕ್ಷ ಸರ್ಕಾರಿ ನೌಕರರು, 4.5 ಲಕ್ಷ ಪಿಂಚಣಿದಾರರು ಹಾಗೂ 3 ಲಕ್ಷ ನಿಗಮ ಮಂಡಳಿ ನೌಕರರಿಗೆ ಅನ್ವಯವಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಕ್ಷರಿ ತಿಳಿಸಿದ್ದಾರೆ.

ಇದನ್ನೂ ಓದಿ :ರಾಜ್ಯದಲ್ಲಿ ಇಂದು 1,464 ಜನರಲ್ಲಿ ಕೋವಿಡ್ ಸೋಂಕು ಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next