Advertisement

ಕಾಂಗ್ರೆಸ್‌ನಲ್ಲಿ ಅರ್ಧ ಡಜನ್‌ ಸಿಎಂ ಸ್ಥಾನ ಆಕಾಂಕ್ಷಿಗಳು: ಪಾಟೀಲ್‌

09:01 PM Jul 08, 2021 | Team Udayavani |

ಗದಗ: ಕಾಂಗ್ರೆಸ್‌ ಪಕ್ಷದಲ್ಲಿ ಅರ್ಧ ಡಜನ್‌ಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಯಾರು ಏನೇ ಹೇಳಿದರೂ ಚುನಾವಣೆ ಬಳಿಕ ಸೇರುವ ಶಾಸಕಾಂಗ ಪಕ್ಷದದಲ್ಲಿ ಮುಖ್ಯಮಂತ್ರಿ ತೀರ್ಮಾನವಾಗುತ್ತದೆ. ಮುಂಬರುವ ವಿಧಾನಸಭಾ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲಾಗುತ್ತದೆ ಎಂದು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಸಮುದಾಯದವರು ತಮ್ಮ ನಾಯಕರು ಮುಖ್ಯಮಂತ್ರಿಯಾಗಬೇಕು ಎಂದು ಬಯಸುವುದು ಸಹಜ. ಉತ್ತರ ಕರ್ನಾಟಕದ ಪ್ರಬಲ ಲಿಂಗಾಯತ ಸಮುದಾಯದವರು, ದಲಿತರು, ಪರಿಶಿಷ್ಟ ಪಂಗಡದವರೂ ತಮ್ಮ ನಾಯಕನನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಅದು ಅವರ ಅಭಿಮಾನದ ಮಾತುಗಳು ಅಷ್ಟೇ. ಆದರೆ, ಮುಖ್ಯಮಂತ್ರಿಯನ್ನು ಹಾದಿ ಬೀದಿಯಲ್ಲಿ ನಿರ್ಣಯಿಸಲಾಗದು.

ಮುಖ್ಯಮಂತ್ರಿ ಆಯ್ಕೆ ಬಗ್ಗೆ ಯಾರೂ ಒತ್ತಾಯ ಮಾಡಬಾರದು ಎಂದು ಪಕ್ಷದ ಹೈಕಮಾಂಡ್‌ ಕೂಡಾ ಸೂಚನೆ ನೀಡಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಬಹುಮತ ಗಳಿಸಿದ ಬಳಿಕ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷದ ಹೈಕಮಾಂಡ್‌ ಸೂಚನೆಯಂತೆ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆ ನಮ್ಮ ಮೊದಲ ಆದ್ಯತೆಯಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next