Advertisement
ಸಿಎಂ ಸಿದ್ದರಾಮಯ್ಯ ಪರ ಸಚಿವ ಎಚ್.ಸಿ. ಮಹದೇವಪ್ಪ, ಬೈರತಿ ಸುರೇಶ್, ಪುತ್ರ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ್ದು, ಸಿಎಂ ಕುರ್ಚಿಖಾಲಿ ಇಲ್ಲ, ಸಿದ್ದರಾಮಯ್ಯ ಅವರೇ ಮುಂದು ವರಿಯುತ್ತಾರೆ ಎಂದು ಪುನರುಚ್ಚರಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರ ಚನ್ನ ಗಿರಿ ಶಾಸಕ ಬಸವರಾಜ್ ಶಿವಗಂಗಾ, ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಕೆಂಚಪ್ಪ ಗೌಡ ಮಾತನಾಡಿ, ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದಿದ್ದಾರೆ.
ಜನರ ಆಶೀರ್ವಾದ ಇರುವವರೆಗೆ ಯಾರು ಕೂಡ ಸಿಎಂ ಸಿದ್ದರಾಮಯ್ಯ ಅವರನ್ನು ಏನು ಮಾಡಲೂ ಆಗದು. ಈ ವಿಷಯದಲ್ಲಿ ಯಾರೂ ತಲೆ ಕೆಡಿಸಿಕೊಳ್ಳಬೇಕಿಲ್ಲ ಎಂದು ಸಚಿವ ಬೈರತಿ ಸುರೇಶ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಸಂವಿಧಾನವನ್ನು ಜೀವನ ಧ್ಯೇಯವನ್ನಾಗಿ ಇಟ್ಟುಕೊಂಡು ಸಿದ್ದರಾಮಯ್ಯ ಆಡಳಿತ ನಡೆಸುತ್ತಿದ್ದಾರೆ. ಹೈಕಮಾಂಡ್, ರಾಹುಲ್ ಗಾಂಧಿ , ಸೋನಿಯಾ ಗಾಂಧಿ, ಸುರ್ಜೇ ವಾಲಾ ಎಲ್ಲರೂ ಅವರ ಪರ ಇದ್ದಾರೆ. ಮುಂದಿನ ದಿನಗಳಲ್ಲಿ ಕ್ರಾಂತಿ ಆಗಬೇಕು ಎಂದರೆ ಹಿಂದುಳಿದ ವರ್ಗದವರು ತುಳಿತಕ್ಕೆ ಒಳಪಟ್ಟವರು ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸಬೇಕು ಎಂದು ಹೇಳಿದರು.
Related Articles
ರಾಜ್ಯದಲ್ಲಿ ಯಾವುದೇ ರೀತಿಯ ರಾಜಕೀಯ ಪ್ರಕ್ಷುಬ್ಧತೆ ಇಲ್ಲ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ರಾಯಚೂರು ಜಿಲ್ಲೆಯ ಜಿಲ್ಲೆಯ ತಿಂಥಣಿ ಬ್ರಿಡ್ಜ್ನ ಕನಕ ಗುರುಪೀಠದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ವೈಯಕ್ತಿಕ. ಎಲ್ಲ ಶಾಸಕರ ಅಭಿಪ್ರಾಯದಂತೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಸಿಎಲ್‌ಪಿ ಅಜೆಂಡಾ ಏನು ಎಂದು ಹೇಳಿಲ್ಲ ಆದರೆ ಸಭೆ ಕರೆದಿದ್ದಾರೆ. ಹೈಕಮಾಂಡ್ ಹೇಳಿದ್ದಕ್ಕೆ ಸಿಎಲ್‌ಪಿ ಮೀಟಿಂಗ್ ಕರೆದಿಲ್ಲ. ಸಿಎಲ್‌ಪಿ ನಾಯಕರೇ ಮೀಟಿಂಗ್ ಕರೆದಿದ್ದಾರೆ ಎಂದರು.
Advertisement
ಡಿಕೆಶಿ ಸಿಎಂ: ಶಾಸಕ ಶಿವಗಂಗಾಈ ನಡುವೆ ಡಿಸಿಎಂ ಡಿಕೆಶಿ ಪರ ದಾವಣಗೆರೆಯಲ್ಲಿ ಮಾತನಾಡಿದ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ, ಡಿಕೆಶಿ ಇದೇ ಅವ ಧಿಯಲ್ಲೇ ಸಿಎಂ ಆಗುತ್ತಾರೆ ಎಂದಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪ ಗೌಡ ಕೂಡ ಡಿಕೆಶಿ ಅವರು ಸಿಎಂ ಆಗಲಿ ಎಂದರು. ಸಿಎಂ ಖರ್ಚಿ ಖಾಲಿ ಇಲ್ಲ.
ನಮ್ಮೊಳಗೆ ಯಾವುದೇ ಗೊಂದಲ ಇಲ್ಲ. ಆದರೂ ಮಾಧ್ಯಮಗಳು ಸಿಎಂ ಬದಲಾವಣೆ ಆಗುತ್ತಾರೆ; ಮುಖ್ಯಮಂತ್ರಿ ಬದಲಾಗುತ್ತಾರೆ ಎನ್ನುವ ಗೊಂದಲ ಮೂಡಿಸುತ್ತಿವೆ. – ಸಿದ್ದರಾಮಯ್ಯ, ಮುಖ್ಯಮಂತ್ರಿ