Advertisement
ಸಂಕೇಶ್ವರ ಪಟ್ಟಣದಲ್ಲಿ ಶನಿವಾರ 4 ಕೋಟಿ ರೂ. ವೆಚ್ಚದ ನೂತನ ಬಸ್ ನಿಲ್ದಾಣ ಹಾಗೂ ಎಸ್ ಎಫ್‌ಸಿ 3.50 ಕೋಟಿ ರೂ. ಅನುದಾನದಲ್ಲಿ ನಿರ್ಮಿಸಲಾದ ಪುರಸಭೆ ಕಟ್ಟಡ ಉದ್ಘಾಟಿಸಿದ ಬಳಿಕ ನೇಸರಿ ಗಾರ್ಡನ್ ನಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ನೆಲ-ಜಲ ಹಾಗೂ ಜನರ ರಕ್ಷಣೆಗೆ ಸರ್ಕಾರ ಕಟಿಬದ್ಧವಾಗಿದೆ. ಇದಲ್ಲದೇ ಉತ್ತರ ಕರ್ನಾಟಕ ಅಭಿವೃದ್ಧಿ ಸೇರಿದಂತೆ ಕೃಷ್ಣಾ ಯೋಜನೆಯಡಿ ರಾಜ್ಯದ ಪಾಲಿನ ನೀರಿನ ಸಂಪೂರ್ಣ ಬಳಕೆಗೆ ಸರ್ಕಾರ ಬದ್ಧವಿದೆ. ಸೂಕ್ತ ವ್ಯವಸ್ಥೆ ಲಭ್ಯವಾದರೆ ರಾಜ್ಯದಲ್ಲಿ ವಿದ್ಯುತ್ ವಿತರಣೆ ವ್ಯವಸ್ಥೆ ವಿಕೇಂದ್ರೀಕರಣಕ್ಕೆ ಸರ್ಕಾರ ಸಿದ್ಧವಿದೆ ಎಂದು ಅವರು ತಿಳಿಸಿದರು.
Related Articles
Advertisement
ಸಂಕೇಶ್ವರ ಪಟ್ಟಣಕ್ಕೆ ಒಳಚರಂಡಿ ವ್ಯವಸ್ಥೆ:ಸಂಕೇಶ್ವರ ಪಟ್ಟಣಕ್ಕೆ ಸಂಪೂರ್ಣಒಳಚರಂಡಿ ವ್ಯವಸ್ಥೆ ಯೋಜನೆಗೆ ವರ್ಷಾಂತ್ಯದಲ್ಲಿ ಅನುಮತಿ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದರು. ವಿಶ್ವನಾಥ್ ಕತ್ತಿ ಹಾಗೂ ತಮ್ಮ ತಂದೆಯವರಾದ ದಿ. ಎಸ್.ಆರ್.ಬೊಮ್ಮಾಯಿ ಅವರ ಆತ್ಮೀಯ ಒಡನಾಟವನ್ನು ಸ್ಮರಿಸಿದರು.
ಜಮೀನು ಹಸ್ತಾಂತರ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಸಂಕೇಶ್ವರ ಹೋಬಳಿಯ ಹರಗಾಪುರ ಗ್ರಾಮದ ಸರಕಾರಿ ಗಾಯರಾಣದ 50 ಎಕರೆ ಜಮೀನನ್ನು ವಸತಿರಹಿತರಿಗೆ ವಸತಿ ಕಲ್ಪಿಸಲು ಸಂಕೇಶ್ವರ ಪುರಸಭೆಗೆ ಹಸ್ತಾಂತರಿಸಿದರು.
ಅರಣ್ಯ, ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವ ಉಮೇಶ ಕತ್ತಿ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕ ದುರ್ಯೋಧನ ಐಹೊಳೆ, ಪರಿಷತ್ ಸದಸ್ಯ ಹಣಮಂತ ನಿರಾಣಿ, ಪುರಸಭೆ ಅಧ್ಯಕ್ಷೆ ಸೀಮಾ ಹತನೂರೆ ಇತರರು ಇದ್ದರು.
ಸಂಕೇಶ್ವರ ಪುರಸಭೆಗೆ 20 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಕೋರಿ ಪುರಸಭೆಯ ಅಧ್ಯಕ್ಷೆ ಸೀಮಾ ಹತನೂರೆ ಮುಖ್ಯಮಂತ್ರಿಗಳಿಗ ೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸ್ವಾಗತಿಸಿದರು. ಪುರಸಭೆಯ ಸದಸ್ಯರು, ಪಟ್ಟಣದ ಗಣ್ಯರು ಸೇರಿದಂತೆ ಅನೇಕರ ಕಾರ್ಯಕ್ರಮದ ಲ್ಲಿ ಪಾಲ್ಗೊಂಡಿದ್ದರು.