Advertisement
ಅಧಿಕಾರಿಗಳ ತುರ್ತು ಸಭೆ: ಮುಖ್ಯಮಂತ್ರಿಯವರ ಪ್ರವಾಸ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾ ಬೆಳಗ್ಗೆ ತುರ್ತಾಗಿ ಅಧಿಕಾರಿಗಳ ಸಭೆ ನಡೆಸಿದ ಸಚಿವ ರೇವಣ್ಣ ಅವರು, ಫೆ. 15 ಮತ್ತು 16 ರಂದು ನಡೆಯುವ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಯವರು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವರು. ಫೆ. 15ರಂದು ಮಧ್ಯಾಹ್ನ 2.30ಕ್ಕೆ ಚನ್ನರಾಯಪಟ್ಟಣ ತಾಲೂಕು ಬರಗೂರು ಹ್ಯಾಂಡ್ ಪೋಸ್ಟ್‌ನಲ್ಲಿ ಆಲಗೊಂಡನಹಳ್ಳಿ ಏತನೀರಾವರಿ ಹಾಗೂ ವಿವಿಧ ಏತ ನೀರಾವರಿ ಯೋಜನೆಗೆ ಚಾಲನೆ ನೀಡುವರು. 4.30ಕ್ಕೆ ದುದ್ದದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಾಂತಿಗ್ರಾಮ, ದುದ್ದ ಹೋಬಳಿಗಳ ಕೆರೆ ತುಂಬಿಸುವ ಯೋಜನೆ ಹಾಗೂ ಕುಡಿಯುವ ನೀರು ಪೂರೈಕೆ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದರು.
Related Articles
Advertisement
ಮಹಿಳಾ ಮೇಳ: ಫೆ.18 ರಂದು ಮಹಿಳಾ ಮೇಳ ನಡೆಯಲಿದ್ದು ರೈತರು ಮಾಡಿರುವ ಕೃಷಿ ಸಾಲ ಮನ್ನಾವಾಗಿರುವ ಫಲಾನುಭಗಳಿಗೆ ಸಾಲ ತೀರುವಳಿ ಪತ್ರ ವಿತರಣೆ ಮಾಡಲಾಗುವುದು. ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾು ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾಲ ತೀರುವಳಿ ಪತ್ರ ವಿತರಿಸಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಶಿಷ್ಠಾಚಾರದಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಸಂಘಟಿಸು ವಂತೆ ಸಚಿವರು ಸೂಚನೆ ನೀಡಿದರು.
ಫೆ.15 ರಿಂದ 18 ರವರೆಗೆ ಪ್ರತಿ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ಸಚಿವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪುಟ್ಟಸ್ವಾಮಿ ಮತ್ತು ಉಪಭಾಗಾಧಿಕಾರಿ ಡಾ.ಎಚ್.ಎಲ್. ನಾಗರಾಜ್, ಹಿಮ್ಸ್ ನಿರ್ದೇಶಕ ಡಾ.ಬಿ.ಸಿ. ರವಿಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಕೆ. ಶಂಕರ್ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಸಭೆಯ ನಂತರ ರೇವಣ್ಣ ಅವರು ಮುಖ್ಯಮಂತ್ರಿ ಯವರ ಕಾರ್ಯಕ್ರಮ ನಡೆಯುವ ಜಿಲ್ಲಾ ಕ್ರೀಡಾಂಗಣ ಮತ್ತು ಕಲಾ ಕಾಲೇಜು ಮೈದಾನಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
167 ಕೋಟಿ ರೂ. ಏತ ನೀರಾವರಿ ಯೋಜನೆಗೆ ಚಾಲನೆ ಹಾಸನ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಮಧ್ಯಾಹ್ನ 2.30 ಗಂಟೆಗೆ ಚನ್ನರಾಯಪಟ್ಟಣ ತಾಲೂಕಿನ 167 ಕೋಟಿ ರೂ. ಅಂದಾಜಿನ 2 ಏತ ನೀರಾವರಿ ಯೋಜನೆಗಳ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.ಕಾವೇರಿ ನೀರಾವರಿ ನಿಗಮದಿಂದ ಕೈಗೊಳ್ಳುವ ಚನ್ನರಾಯಪಟ್ಟಣ ತಾಲೂಕು, ಆನೆಕೆರೆ ಗ್ರಾಮದ ಶ್ರೀ ಶಂಭುದೇವರ ಕೆರೆಯಿಂದ ನೀರೆತ್ತಿ ಚನ್ನರಾಯಪಟ್ಟಣ ತಾಲೂಕಿನ 26 ಕೆರೆಗಳಿಗೆ ನೀರು ತುಂಬಿಸುವ ಹಾಗೂ ಹಾಲಿ ಇರುವ ಆಲ ಗೊಂಡನಹಳ್ಳಿ ಏತ ನೀರಾವರಿ ವ್ಯಾಪ್ತಿಯ
ಅಚ್ಚುಕಟ್ಟಿಗೆ ನೀರು ಒದಗಿಸುವ ಯೋಜನೆಯ ರೂ. 47 ಕೋಟಿ ರೂ. ಮೊತ್ತದ ಕಾಮಗಾರಿಗೆ ಚಾಲನೆ ನೀಡುವುರು. ಚನ್ನರಾಯಪಟ್ಟಣ ತಾಲೂಕು ದಂಡಿಗನಹಳ್ಳಿ ಹೋಬಳಿಯ ಕಾಚೇನಹಳ್ಳಿ ಏತ ನೀರಾವರಿ ಯೋಜನೆಯ ಮೂರನೇ ಹಂತಕ್ಕೆ ನೀರು ಒದಗಿಸುವ 141.50 ಕೋಟಿ ರೂ.ವೆಚ್ಚದ ಕಾಮಗಾರಿಗಳ ಭೂಮಿ ಪೂಜೆಯನ್ನು ಮುಖ್ಯಮಂತ್ರಿ ಯವರು ನೆರವೇರಿಸಲಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.