Advertisement

ಸಿಎಂ ಕಾರ್ಯಕ್ರಮ: ಅಗತ್ಯ ಭದ್ರತಾ ಕ್ರಮಕ್ಕೆ ಸೂಚನೆ

12:20 PM Nov 11, 2018 | Team Udayavani |

ಬೀದರ: ನ.14ರಂದು ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗಮಿಸುತ್ತಿರುವ
ಹಿನ್ನೆಲೆಯಲ್ಲಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಅವರು ಶನಿವಾರ ನಗರದ ಪ್ರವಾಸಿ
ಮಂದಿರದಲ್ಲಿ ಅಧಿಕಾರಿಗಳ ಮತ್ತೂಂದು ಸಭೆ ನಡೆಸಿದರು.

Advertisement

ಸಭೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ನ.14ರಂದು ಮುಖ್ಯಮಂತ್ರಿಗಳು ಸಂಚರಿಸುವ ಮಾರ್ಗಗಳ ಬಗ್ಗೆ ಪೊಲೀಸ್‌ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಅಗತ್ಯ ಭದ್ರತೆಗೆ ಕ್ರಮ ವಹಿಸಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಶ್ರೀಧರ್‌ ಅವರಿಗೆ ತಿಳಿಸಿದರು.

ಕೃಷಿ ಇಲಾಖೆ ಅಧಿಕಾರಿ ವಿದ್ಯಾನಂದ ಸಿ. ಮಾತನಾಡಿ, ಮುಖ್ಯಮಂತ್ರಿಗಳ ಕ್ಷೇತ್ರಭೇಟಿ ಕಾರ್ಯಕ್ರಮದ ತಯಾರಿ
ಮಾಡಿಕೊಳ್ಳಲಾಗುತ್ತಿದೆ. ರೈತ ಸ್ಪಂದನ ಕಾರ್ಯಕ್ರಮ ನಡೆಯುವ ರಂಗಮಂದಿರ ಆವರಣದಲ್ಲಿ ಸಾವಯವ ಕೃಷಿಯ ಪರಿಕರಗಳ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು. 

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿ ಬಾಬು, ಕೃಷಿ ಇಲಾಖೆಯ ಸೋಮಶೇಖರ ಬಿರಾದಾರ,
ಅನ್ಸಾರಿ ಎಂ.ಎ.ಕೆ., ವಾರ್ತಾಧಿಕಾರಿ ಗವಿಸಿದ್ದಪ್ಪ ಹಾಗೂ ಇತರರು ಇದ್ದರು.

ಗಮನ ಸೆಳೆಯುವ ರೀತಿ ಅಂಗಡಿ ತೆರೆಯಿರಿ 
 ಬೀದರ: ಜಿಲ್ಲೆಯಲ್ಲಿ ಮೊದಲ ಬಾರಿಗೆ ಸಹಕಾರಿ ಸಪ್ತಾಹ ಕಾರ್ಯಕ್ರಮ ನಡೆಯುತ್ತಿದ್ದು, ಕಾರ್ಯಕ್ರಮದ ನಡೆಯುವ
ಆವರಣದಲ್ಲಿ ಗಮನ ಸೆಳೆಯುವ ರೀತಿಯಲ್ಲಿ ವಿವಿಧ ಅಂಗಡಿಗಳನ್ನು ತೆರೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಅಧಿಕಾರಿಗಳಿಗೆ ಸೂಚಿಸಿದರು.  ನಗರದ ನೆಹರೂ ಕ್ರೀಡಾಂಗಣಕ್ಕೆ ಶನಿವಾರ ಭೇಟಿನೀಡಿ ಕಾರ್ಯಕ್ರಮದ ವೇದಿಕೆ ನಿರ್ಮಾಣ ಪರಿಶೀಲನೆ ನಡೆಸಿದ ನಂತರ ಅಂಗಡಿಗಳ ತೆರೆಯುವ ಕುರಿತು ಅಧಿಕಾರಿಗಳ ಜತೆಗೆ ಚರ್ಚಿಸಿದ ಸಚಿವರು, ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸಹಕಾರಿಗಳು ಆಗಮಿಸುತ್ತಾರೆ. ಅವರಿಗೆ
ಆಕರ್ಷಕವಾಗಿ ಕಾಣುವಂತೆ ಅಂಗಡಿಗಳನ್ನು ತೆರೆಯಬೇಕು ಎಂದು ಸೂಚಿಸಿದರು.

Advertisement

ಈ ವೇಳೆ ಸಹಕಾರಿ ಸಂಘಗಳ ಉಪನಿಬಂಧಕ ಕಲ್ಲಪ್ಪ ಬನ್ನಗೋಳ ಮಾತನಾಡಿ, ಹಾಪ್ಸ್‌ಕಾಂ, ಟೆಕ್ಸ್‌ಟೈಲ್‌,
ಕಂಬಳಿ, ಶಾಲು, ಬಿದ್ರಿ ಕಲೆ ಉಪಕರಣಗಳ ಪ್ರದರ್ಶನ ಸೇರಿದಂತೆ ಒಟ್ಟು 15 ಮಳಿಗೆಗಳನ್ನು ತೆರೆಯುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು. ನಂತರ ಮಾತನಾಡಿದ ಸಚಿವರು, ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿ. ವೇದಿಕೆಯನ್ನು ಸುಭದ್ರವಾಗಿ ನಿರ್ಮಿಸಿ ಎಂದು ಸಲಹೆ ನೀಡಿದರು. 

ಶಾಸಕ ರಹೀಂ ಖಾನ್‌, ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಭಾರತಬಾಯಿ ಶೇರಿಕಾರ, ವಿಧಾನ ಪರಿಷತ್‌ ಸದಸ್ಯ
ಅರವಿಂದಕುಮಾರ ಅರಳಿ, ನಗರಸಭೆ ಅಧ್ಯಕ್ಷೆ ಶಾಲಿನಿರಾಜು ಚಿಂತಾಮಣಿ ಹಾಗೂ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next