Advertisement

ವಿದುರಾಶ್ವತ ದ್ವಿತೀಯಹಂತದ ಅಭಿವೃದ್ಧಿಗೆ ನೆರವು ಕಲ್ಪಿಸಲು CMಗೆ ಪ್ರಸ್ತಾವನೆ:ಶಿವಶಂಕರರೆಡ್ಡಿ

10:09 AM Mar 12, 2021 | Team Udayavani |

ಚಿಕ್ಕಬಳ್ಳಾಪುರ: ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣಗಳನ್ನು ಬಲಿದಾನಗಳನ್ನು ನೀಡಿದ ಕರ್ನಾಟಕದ ಜಲಿಯನ್ ವಾಲಾಬಾಗ್ ಎಂದು ಖ್ಯಾತಿ ಹೊಂದಿರುವ ಗೌರಿಬಿದನೂರು ತಾಲ್ಲೂಕಿನ ವಿದುರಾಶ್ವತವನ್ನು ದ್ವಿತೀಯ ಹಂತದಲ್ಲಿ ಅಭಿವೃದ್ಧಿಗೊಳಿಸಲು ಅಗತ್ಯ ನೆರವು ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದೆಂದು ಮಾಜಿ ಸಚಿವ ಹಾಗೂ ಶಾಸಕ ಎನ್ಎಚ್ ಶಿವಶಂಕರರೆಡ್ಡಿ ತಿಳಿಸಿದರು.

Advertisement

ತಾಲೂಕಿನ ವಿದುರಾಶ್ವತದಲ್ಲಿ 75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಅಮೃತ ಮಹೋತ್ಸವದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಯೋಗ ತರಗತಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ದೇಶಾದ್ಯಂತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 75 ನೇ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ರಾಜ್ಯದಲ್ಲಿ  ವಿದುರಾಶ್ವತ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ,ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾಗವಹಿಸಲಿದ್ದಾರೆ ಎಂದರು.

ವಿದುರಾಶ್ವತ್ಥದಲ್ಲಿ ಈಗಾಗಲೇ ಅನೇಕ ರೀತಿಯ ಅಭಿವೃದ್ಧಿ ಕಾಮಗಾರಿಗಳು ನಡೆಸಲಾಗಿದೆ ಜೊತೆಗೆ ಎರಡನೇ ಹಂತದಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿ ನಡೆಸಲು ನೆರವು ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಇದನ್ನೂ ಓದಿ: ಚಾಕೋ: ಸೋಲಿನ ಬಾಲ ಹಿಡಿದವರೆಂದಿಗೂ ಒಂಟಿಯೇ!

Advertisement

ದೇಶದ ಸ್ವಾತಂತ್ರ್ಯಕ್ಕಾಗಿ ವಿದುರಾಶ್ವತ್ಥದಲ್ಲಿ ಅನಧಿಕೃತವಾಗಿ 32 ಹಾಗೂ ಅಧಿಕೃತವಾಗಿ ಒಂಬತ್ತು ಮಂದಿ ಹುತಾತ್ಮರ ಆಗಿದ್ದಾರೆಂದು ದಾಖಲಾಗಿದೆ. ಸ್ವಾತಂತ್ರ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳಿಂದ ನಾವೆಲ್ಲರೂ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದೇವೆ. ಸ್ವಾತಂತ್ರ್ಯಕ್ಕಾಗಿ ಪ್ರಾಣಗಳನ್ನು ತ್ಯಾಗಮಾಡಿದ ಹುತಾತ್ಮರನ್ನು ಸ್ಮರಿಸಿ ಯುವಕರಿಗೆ ಅದರಲ್ಲೂ ವಿಶೇಷವಾಗಿ ಮುಂದಿನ ಪೀಳಿಗೆಗೆ ಸ್ವಾತಂತ್ರ್ಯದ ಕುರಿತು ಅರಿವು ಮೂಡಿಸಬೇಕೆಂದು ಕರೆ ನೀಡಿದರು.

ಯೋಗಾಭ್ಯಾಸ ಸಾವಿರಾರು ವರ್ಷಗಳಿಂದ  ಬಂದಿರುವ ಒಂದು ಸಾಧನ ಇದರ ಮಹತ್ವವನ್ನು ಅರಿತು ಈಗಾಗಲೇ ಸರ್ಕಾರಿ ನೌಕರರಿಗೆ ಮತ್ತು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸದ ಕುರಿತು ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು.

ಮನುಷ್ಯ ದೈಹಿಕ ಮತ್ತು ಮಾನಸಿಕವಾಗಿ ಸಮತೋಲನ ಕಾಪಾಡಲು ಯೋಗ ಸಹಕಾರಿಯಾಗಿದ್ದು ಪ್ರತಿನಿತ್ಯ ಯೋಗಾಭ್ಯಾಸ ಮಾಡುವ ಜನರು ಬೆಳಗ್ಗೆಯಿಂದ ಸಂಜೆವರೆಗೆ ಒಂದು ರೀತಿಯಲ್ಲಿ ಉತ್ಸಾಹದಿಂದ ಇರುತ್ತಾರೆ ಸಮಾಜದಲ್ಲಿರುವ ಪ್ರತಿಯೊಬ್ಬರೂ ಯೋಗಾಭ್ಯಾಸ ಮಾಡಿ ವಿಶೇಷವಾಗಿ ಶಾಲಾ ಮಕ್ಕಳಿಗೆ ಯೋಗ ಕಲಿಸಬೇಕು ಅದರ ಮೂಲಕ ಆರೋಗ್ಯವಂತ ಸಮಾಜವನ್ನು ನಿರ್ಮಿಸಬೇಕೆಂದು ಕರೆ ನೀಡಿದರು.

ಇದನ್ನೂ ಓದಿ:  ಎಚ್ಚರಿಕೆ ವಹಿಸಿ, ಕೋವಿಡ್-19 ಸಾಂಕ್ರಮಿಕ ರೋಗ ಇನ್ನೂ ಮುಗಿದಿಲ್ಲ: ಕೆಂದ್ರ ಸರ್ಕಾರ

ಕಾರ್ಯಕ್ರಮದಲ್ಲಿ ಸ್ವತಂತ್ರ ಹೋರಾಟಗಾರ ಬ್ರಹ್ಮಯ್ಯ,ಜಿ ಲ್ಲಾ ಆಯುಷ್ ಇಲಾಖೆಯ ಅಧಿಕಾರಿ ತಬೀಬ್ ಉನ್ನಿಸಾ, ತಾಲೂಕ ದಂಡದಿಕಾರಿ ಶ್ರೀನಿವಾಸ್, ಬಿಇಓ ಶ್ರೀನಿವಾಸಮೂರ್ತಿ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ:   ನಿತ್ಯಭವಿಷ್ಯ: ಈ ರಾಶಿಯವರ ಹಣದ ದಾಹ ಆರ್ಥಿಕ ಸ್ಥಿತಿಯ ಏರುಪೇರಿಗೆ ಕಾರಣವಾಗಲಿದೆ !

Advertisement

Udayavani is now on Telegram. Click here to join our channel and stay updated with the latest news.

Next