ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ. ತತ್‌ಕ್ಷಣ ಬಂಧಿತರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
Advertisement
ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂಬಂತೆ ಸಂಭ್ರಮಿಸುತ್ತಿರುವ ಪ್ರಧಾನಿ ಮೋದಿ ಅವರ ಸರಕಾರ ಅಲ್ಲಿಂದ ಕೂಗಳತೆ ದೂರದಲ್ಲಿ ಧರಣಿ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಜಾಸತ್ತಾತ್ಮಕ ಹಕ್ಕನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ ಎಂದು ಕಿಡಿಕಾರಿದ್ದಾರೆ.