ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರದಲ್ಲಿ ಪಾರದರ್ಶಕವಾದ ತನಿಖೆಯನ್ನು ನಡೆಸುತ್ತೇವೆ. ತನಿಖೆಯ ಆಧಾರದಲ್ಲಿ ಮುಂದೆ ಏನು ಎಂಬುವುದನ್ನು ಚರ್ಚಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರದ ಬಗ್ಗೆ ಸಂಪೂರ್ಣ ವಿಚಾರಣೆ ಮಾಡುತ್ತೇವೆ. ಸಂತೋಷ್ ಪಾಟೀಲ್ ದೇಹ ಉಡುಪಿಯ ಲಾಡ್ಜ್ ನಲ್ಲಿ ಪತ್ತೆಯಾಗಿದೆ. ಖುದ್ದು ಎಸ್.ಪಿ ಸ್ಥಳಕ್ಕೆ ಹೋಗಿದ್ದಾರೆ ಪ್ರಾಥಮಿಕ ತನಿಖೆ ಈಗಷ್ಟೇ ನಡೆಯುತ್ತಿದೆ. ಪ್ರಾಥಮಿಕ ವರದಿ ಬಂದ ಬಳಿಕ ಏನು ಅಂತಾ ನಿರ್ಧರಿಸುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ:ಕೂಡಲೇ ಈಶ್ವರಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಬಂಧಿಸಿ: ಡಿಕೆ ಶಿವಕುಮಾರ್ ಆಗ್ರಹ
ಎಲ್ಲವನ್ನೂ ತನಿಖೆಗೆ ಒಳಪಡಿಸುತ್ತೇವೆ. ಪಾರದರ್ಶಕವಾದ ತನಿಖೆಯನ್ನು ನಡೆಸುತ್ತೇವೆ. ತನಿಖೆಯ ಆಧಾರದಲ್ಲಿ ಮುಂದೆ ಏನು ಎಂಬುವುದನ್ನು ಚರ್ಚಿಸುತ್ತೇವೆ. ಹಿಂದೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಿದ್ದರಾಮಯ್ಯ ರಾಜೀನಾಮೆ ಏನಾದರೂ ಕೊಟ್ಟಿದ್ದಾರ..? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರಶ್ನೆ ಹಾಕಿದರು.
ಈಶ್ವರಪ್ಪ ವಿರುದ್ಧ ಮಾಡಿರುವ ಆರೋಪಕ್ಕೆ ಮಾನನಷ್ಟ ಮೊಕದ್ದಮೆ ಹಾಕಿದ್ದರು. ಈಶ್ವರಪ್ಪ ಮೈಸೂರಿನಲ್ಲಿದ್ದಾರೆ ನಾನೇ ವಿಚಾರಿಸುತ್ತೇನೆ. ಯಾಕಾಗಿ ಈ ಆತ್ಮಹತ್ಯೆ ಮಾಡಿಕೊಂಡರು ಎಂದು ತನಿಖೆಯಿಂದ ಗೊತ್ತಾಗಬೇಕು. ತನಿಖೆಯಲ್ಲಿ ಇದೆಲ್ಲವೂ ಗೊತ್ತಾಗಲಿದೆ ಎಂದರು.
ಇದನ್ನೂ ಓದಿ:ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಉಡುಪಿಯಲ್ಲಿ ಆತ್ಮಹತ್ಯೆ!