Advertisement
ನವದೆಹಲಿಯಲ್ಲಿ ಕೇಂದ್ರ ಸಚಿವ ಗಡ್ಕರಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿಯವರು ಭಾರತ್‍ಮಾಲಾ ಪರಿಯೋಜನಾ ಅಡಿಯಲ್ಲಿ ಕೈಗೆತ್ತಿಕೊಂಡಿರುವ ಬೆಂಗಳೂರು ಸುತ್ತಲಿನ ಸಂಚಾರವನ್ನು ಸುಗಮ ಗೊಳಿಸುವ ಉಪನಗರ ವರ್ತುಲ ರಸ್ತೆ ಯೋಜನೆಯ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಲು ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಬೆಂಗಳೂರಿನಲ್ಲಿ ನಡೆಸಿದ ಸಭೆಯಲ್ಲಿ ಸಚಿವರು ಒಪ್ಪಿರುವುದನ್ನು ಸ್ಮರಿಸಿದರು. ಈ ಸಭೆಯಲ್ಲಿ ಚರ್ಚಿಸಿದಂತೆ ಕರ್ನಾಟಕ ಸರ್ಕಾರವು ಭೂಸ್ವಾಧೀನ ವೆಚ್ಚ 1560 ಕೋಟಿ ರೂ. ಗಳ ಶೇ. 30ರಷ್ಟನ್ನು ಭರಿಸಲು ಸಮ್ಮತಿ ಪತ್ರ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು.
Related Articles
Advertisement
ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ತಾತ್ವಿಕ ಅನುಮೋದನೆ ನೀಡಿರುವ ನಾಲ್ಕು ಹೆದ್ದಾರಿಗಳ ಕುರಿತು ಡಿಪಿಆರ್ ಸಿದ್ಧ ಪಡಿಸಿ ಕೇಂದ್ರಕ್ಕೆ ಸಲ್ಲಿಸಲಾಗಿದ್ದು, ಅವುಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಕಂದಾಯ ಸಚಿವ ಆರ್. ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಮೃತ ವ್ಯಕ್ತಿಯೇ ಎದ್ದು ಬಂದು ಆಸ್ತಿ ಮಾರಿದ :ಇಲ್ಲೊಂದು ವಿಚಿತ್ರ ಪ್ರಕರಣ