Advertisement
ಚಿತ್ರದುರ್ಗ ಜಿಲ್ಲೆಯ ಚಳ್ಳ ಕೆರೆ ತಾ| ತಳಕು ಹೋಬಳಿಯ ಬಸಾಪುರ ಗ್ರಾಮದ ಯುವ ಕಾಂಗ್ರೆಸ್ ಮುಖಂಡ ಮಹೇಂದ್ರ ಅವರು ತಮ್ಮ ಗ್ರಾಮದ ಬಡ ವೃದ್ಧೆ ದೊಣಮ್ಮ (81) ಅವರ ಮನೆಗೆ ವಿದ್ಯುತ್ ಸಂಪರ್ಕ ಇಲ್ಲದಿರುವ ಬಗ್ಗೆ ತಮ್ಮ “ಎಕ್ಸ್” ಸಾಮಾಜಿಕ ಜಾಲತಾಣದ ಖಾತೆ ಮೂಲಕ ಸಿಎಂಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಸಿದ್ದರಾಮಯ್ಯ ಕೂಡಲೇ ವೃದ್ಧೆ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಸುಮಾರು 55 ವರ್ಷಗಳಿಂದ ದೊಣಮ್ಮ ಬಸಾಪುರ ದಲ್ಲಿ ಜಮೀನುಗಳಲ್ಲಿ ಕೂಲಿ ಕೆಲಸ ಮಾಡುತ್ತ ಜೀವನ ನಿರ್ವ ಹಿಸುತ್ತಿದ್ದಾರೆ.ಸಿಎಂ ಕಚೇರಿಯಿಂದ ಆದೇಶ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ವೃದ್ಧೆ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ.