Advertisement

ಮೋದಿ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲಿಸಿದ ಸಿಎಂ

10:57 PM Dec 31, 2019 | Lakshmi GovindaRaj |

ತುಮಕೂರು: ನಗರದಲ್ಲಿ ನಾಳೆ (ಜ. 2) ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುವ ಕೃಷಿ ಸಮ್ಮಾನ್‌ ಯೋಜನೆ ಅನುಷ್ಠಾನ ಕಾರ್ಯಕ್ರಮ ಹಾಗೂ ಕೃಷಿ ಕರ್ಮಣ್‌ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಒಂದೂವರೆ ಲಕ್ಷ ರೈತರು ಸೇರುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

Advertisement

ನಗರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶ್ರೀ ಸಿದ್ಧಗಂಗಾ ಮಠ ಹಾಗೂ ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿ, ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನಾಳೆ ಮಧ್ಯಾಹ್ನ ಸುಮಾರು 2.15ಕ್ಕೆ ಪ್ರಧಾನಿಗಳು ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ನಂತರ ಮಠದ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ ಎಂದು ತಿಳಿಸಿದರು.

ಸಮಾವೇಶದಲ್ಲಿ ದೇಶದ 16 ರಾಜ್ಯಗಳ ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿದ ಆಯ್ದ 28 ಮಂದಿ ಪ್ರಗತಿಪರ ರೈತರಿಗೆ ಪ್ರಶಸ್ತಿ ಪ್ರದಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಿದ್ದಾರೆ. ಇದೊಂದು ಅದ್ಧೂರಿ ಸಮಾರಂಭವಾಗಿದ್ದು, ಜಾರ್ಖಂಡ್‌ನ‌ ಮುಖ್ಯಮಂತ್ರಿಗಳು, ಉತ್ತರಖಾಂಡ್‌ನ‌ ರಾಜ್ಯಪಾಲರು ಸೇರಿ ವಿವಿಧ ರಾಜ್ಯದ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next