Advertisement

ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ, ಅದರ ಬಗ್ಗೆ ಚರ್ಚೆ ಬೇಡ: ಶೆಟ್ಟರ್

03:12 PM Jan 02, 2021 | Team Udayavani |

ಹುಬ್ಬಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹೀಗಾಗಿ ಅದರ ಬಗ್ಗೆ ಚರ್ಚೆ ಬೇಡ. ಅವಧಿ ಮುಗಿಯುವವರೆಗೂ ಬಿ.ಎಸ್.‌ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸಚಿವ ಜಗದೀಶ ಶೆಟ್ಟರ ಹೇಳಿದರು.

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಅವರು ಕೇಂದ್ರದ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ. ಆ ಕುರಿತು ಅವರೇ ಅಂತಿಮ ನಿರ್ಧಾರ ಕೈಗೊಳ್ಳುವರು ಎಂದರು.

ಇದನ್ನೂ ಓದಿ:ಹುಬ್ಬಳ್ಳಿ: ಸಚಿವ ಜಗದೀಶ್ ಶೆಟ್ಟರ್ ಸಮೀಪವೇ ಕುಸಿದ ಮಣ್ಣಿನ ದಿಬ್ಬ! ಪಾರಾದ ಸಚಿವರು

ಶಿವಮೊಗ್ಗದಲ್ಲಿ ನಡೆಯಲಿರುವ ಕೋರ್ ಕಮೀಟಿಗೆ ಹಾಜರಾಗಲಿದ್ದೇನೆ. ಪ್ರತಿ ತಿಂಗಳು ಪಕ್ಷದ ಕಾರ್ಯಕಾರಿಣಿ ನಡೆಯುತ್ತದೆ. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆದ್ದವರಲ್ಲಿ ಶೇ. 60ಕ್ಕಿಂತ ಹೆಚ್ಚು ಬಿಜೆಪಿ ಬೆಂಬಲಿತರಾಗಿದ್ದಾರೆ.  ಬೇರುಮಟ್ಟದಲ್ಲಿ ಬಿಜೆಪಿ ಬೆಳೆದಿದೆ ಎಂಬುದಕ್ಕೆ ಗ್ರಾ.ಪಂ ಚುನಾವಣೆ ಫಲಿತಾಂಶ ಉದಾಹರಣೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next