ಭೋಪಾಲ: ಬಿಜೆಪಿ ಆಡಳಿತ ಇರುವ ಮಧ್ಯಪ್ರದೇಶದಲ್ಲಿ ಸಮಾನ ನಾಗರಿಕ ಸಂಹಿತೆ (ಯುಸಿಸಿ)ಜಾರಿಗೊಳಿಸುವ ನಿಟ್ಟಿನಲ್ಲಿ ಸಮಿತಿ ರಚಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಾಹಿತಿ ನೀಡಿದ್ದಾರೆ.
Advertisement
ಬದ್ವಾನಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸುವ ಸಮಯ ಬಂದಿದೆ. ಮಧ್ಯಪ್ರದೇಶದಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ಸಮಿತಿ ರಚಿಸಲಾಗುತ್ತದೆ ಎಂದರು.
ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಆಡಳಿತದಲ್ಲಿ ಇರುವ ರಾಜ್ಯಗಳಲ್ಲಿ ಯುಸಿಸಿ ಜಾರಿಗೊಳಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿವೆ.