Advertisement

CM Siddaramaiah; ಕಾಲಮಿತಿಯಲ್ಲಿ 34,863 ಹುದ್ದೆ ಭರ್ತಿ

12:45 AM Oct 08, 2024 | Team Udayavani |

ಬೆಂಗಳೂರು: ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 34,863 ಹುದ್ದೆಗಳ ಭರ್ತಿಗೆ ಕಾಲಮಿತಿ ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಲ್ಲದೆ ಅಗತ್ಯ ಸೇವೆಗಳ ಇಲಾಖೆಗಳಲ್ಲಿನ ನೇಮಕಾತಿಗೆ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

Advertisement

ಅಲ್ಲದೆ ನೇಮಕಾತಿ ಕುರಿತು ವಾರ್ಷಿಕ ಕ್ಯಾಲೆಂಡರ್‌ ಸಿದ್ಧಪಡಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು. ಆರ್ಥಿಕ ವರ್ಷದ ಆರಂಭದಲ್ಲಿ ಆಯಾ ಇಲಾಖೆ ಗಳು ನೇಮಕಾತಿಗೆ ಖಾಲಿ ಇರುವ ಹುದ್ದೆ ಗಳ ಕುರಿತು ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳಿಸಬೇಕು. ಕಾಲಮಿತಿಯೊಳಗೆ ಹಣಕಾಸು ಇಲಾಖೆಯಿಂದ ಅನು ಮೋದನೆ ಪಡೆದುಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಬಗ್ಗೆ ಏಕ ರೀತಿಯ ಕ್ಯಾಲೆಂಡರ್‌ ಸಿದ್ಧಪಡಿಸಬೇಕು ಎಂದೂ ತಾಕೀತು ಮಾಡಿದ್ದಾರೆ.

ಸರಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಮುಖ್ಯಮಂತ್ರಿಯವರು, ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಯುಪಿಎಸ್ಸಿಯಲ್ಲಿ ಕೇವಲ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಹು¨ªೆಗಳನ್ನು ಮಾಡಲು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್ಸಿ ಕೇವಲ ಗ್ರೂಪ್‌ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್‌ ಸಿಯಂತಹ ಬೇರೆ ನೇಮಕಾತಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮಾಡುವ ಕುರಿತು ಚರ್ಚೆ ನಡೆಸಲಾಗಿದೆ.
371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹು¨ªೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳುವಂತೆ ತಿಳಿಸಿದ ಮುಖ್ಯಮಂತ್ರಿಯವರು, ಕೇರಳ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಸಚಿವರಾದ ಡಾ| ಜಿ. ಪರಮೇಶ್ವರ್‌, ಎಚ್‌.ಕೆ. ಪಾಟೀಲ, ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್‌, ಡಾ| ಶರಣ ಪ್ರಕಾಶ ಪಾಟೀಲ, ಮಧು ಬಂಗಾರಪ್ಪ, ಬೈರತಿ ಸುರೇಶ್‌, ಡಾ| ಎಂ.ಸಿ. ಸುಧಾಕರ್‌ ಮೊದಲಾದವರು ಉಪಸ್ಥಿತರಿದ್ದರು.

Advertisement

ಮಾದರಿ ಸಿ ಆ್ಯಂಡ್‌ ಆರ್‌ ಸಿದ್ಧಪಡಿಸಲು ಸೂಚನೆ
ರಾಜ್ಯದಲ್ಲಿ 41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾಗದ ಕಾರಣ ನೇಮಕಾತಿ ವಿಳಂಬವಾಗುತ್ತಿದೆ. ಕೆಲವು ಇಲಾಖೆಗಳಲ್ಲಿ ಹಲವು ದಶಕಗಳಿಂದ ಸಿ ಆ್ಯಂಡ್‌ ಆರ್‌ ತಿದ್ದುಪಡಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲ ಇಲಾಖೆಗಳಿಗೆ ಅನುಕೂಲವಾಗುವಂತೆ ಮಾದರಿ ಸಿ ಆ್ಯಂಡ್‌ ಆರ್‌ (ವೃಂದ ಮತ್ತು ನೇಮಕಾತಿ ನಿಯಮಗಳು) ಸಿದ್ಧಪಡಿಸಲು ಮುಖ್ಯಮಂತ್ರಿ ಸೂಚನೆ ನೀಡಿದರು. ಪಿಎಸ್‌ಐ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಮೊದಲು ನಡೆಸಲಾಗುತ್ತಿದ್ದು, ಅಬಕಾರಿ ಇಲಾಖೆ ನೇಮಕಾತಿಯಲ್ಲಿ ಲಿಖೀತ ಪರೀಕ್ಷೆಯನ್ನು ಮೊದಲು ಮಾಡಲಾಗುತ್ತದೆ. ಅಬಕಾರಿ ಇಲಾಖೆ ಮಾದರಿಯನ್ನು ಪಿಎಸ್‌ಐ ನೇಮಕಾತಿಯಲ್ಲೂ ಅನುಸರಿಸುವ ಕುರಿತು ಪರಿಶೀಲನೆ ನಡೆಸಲು ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next