Advertisement
ಅಲ್ಲದೆ ನೇಮಕಾತಿ ಕುರಿತು ವಾರ್ಷಿಕ ಕ್ಯಾಲೆಂಡರ್ ಸಿದ್ಧಪಡಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು. ಆರ್ಥಿಕ ವರ್ಷದ ಆರಂಭದಲ್ಲಿ ಆಯಾ ಇಲಾಖೆ ಗಳು ನೇಮಕಾತಿಗೆ ಖಾಲಿ ಇರುವ ಹುದ್ದೆ ಗಳ ಕುರಿತು ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳಿಸಬೇಕು. ಕಾಲಮಿತಿಯೊಳಗೆ ಹಣಕಾಸು ಇಲಾಖೆಯಿಂದ ಅನು ಮೋದನೆ ಪಡೆದುಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಬಗ್ಗೆ ಏಕ ರೀತಿಯ ಕ್ಯಾಲೆಂಡರ್ ಸಿದ್ಧಪಡಿಸಬೇಕು ಎಂದೂ ತಾಕೀತು ಮಾಡಿದ್ದಾರೆ.
371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹು¨ªೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳುವಂತೆ ತಿಳಿಸಿದ ಮುಖ್ಯಮಂತ್ರಿಯವರು, ಕೇರಳ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರು.
Related Articles
Advertisement
ಮಾದರಿ ಸಿ ಆ್ಯಂಡ್ ಆರ್ ಸಿದ್ಧಪಡಿಸಲು ಸೂಚನೆರಾಜ್ಯದಲ್ಲಿ 41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾಗದ ಕಾರಣ ನೇಮಕಾತಿ ವಿಳಂಬವಾಗುತ್ತಿದೆ. ಕೆಲವು ಇಲಾಖೆಗಳಲ್ಲಿ ಹಲವು ದಶಕಗಳಿಂದ ಸಿ ಆ್ಯಂಡ್ ಆರ್ ತಿದ್ದುಪಡಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲ ಇಲಾಖೆಗಳಿಗೆ ಅನುಕೂಲವಾಗುವಂತೆ ಮಾದರಿ ಸಿ ಆ್ಯಂಡ್ ಆರ್ (ವೃಂದ ಮತ್ತು ನೇಮಕಾತಿ ನಿಯಮಗಳು) ಸಿದ್ಧಪಡಿಸಲು ಮುಖ್ಯಮಂತ್ರಿ ಸೂಚನೆ ನೀಡಿದರು. ಪಿಎಸ್‌ಐ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಮೊದಲು ನಡೆಸಲಾಗುತ್ತಿದ್ದು, ಅಬಕಾರಿ ಇಲಾಖೆ ನೇಮಕಾತಿಯಲ್ಲಿ ಲಿಖೀತ ಪರೀಕ್ಷೆಯನ್ನು ಮೊದಲು ಮಾಡಲಾಗುತ್ತದೆ. ಅಬಕಾರಿ ಇಲಾಖೆ ಮಾದರಿಯನ್ನು ಪಿಎಸ್‌ಐ ನೇಮಕಾತಿಯಲ್ಲೂ ಅನುಸರಿಸುವ ಕುರಿತು ಪರಿಶೀಲನೆ ನಡೆಸಲು ಸೂಚನೆ ನೀಡಿದರು.