Advertisement

Siddaramaiah: ಗಾಂಧಿ ಕೊಂದ ಮನಸ್ಥಿತಿಯೇ ಗೌರಿ ಹತ್ಯೆ ಮಾಡಿದೆ

10:40 AM Sep 06, 2023 | Team Udayavani |

ಬೆಂಗಳೂರು: ಗಾಂಧೀಜಿ ಅವರನ್ನು ಕೊಂದ ಮನಸ್ಥಿತಿಯೇ ಗೌರಿ ಲಂಕೇಶ್‌, ದಾಭೋಲ್ಕರ್‌, ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಅವರನ್ನು ಕೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.

Advertisement

ಗೌರಿ ಮೆಮೋರಿಯಲ್‌ ಟ್ರಸ್ಟ್‌, ಪತ್ರಕರ್ತೆ ಗೌರಿ ಲಂಕೇಶ್‌ ಸ್ಮರಣಾರ್ಥ ಪುರಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “ಸರ್ವಾಧಿಕಾಲದ ಹೊತ್ತಲ್ಲಿ ದೇಶವನ್ನು ಮರುಕಟ್ಟುವ ಕಲ್ಪನೆ’ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮಗಾಂಧೀಜಿ ಅವರು ಧರ್ಮ ನಿರಪೇಕ್ಷತೆಯಿಂದ ಬದುಕನ್ನು ಆಚರಿಸುತ್ತಿದ್ದರು. ಇದನ್ನು ಸಹಿಸಲಾಗದ ಮನಸ್ಥಿತಿ ಅವರನ್ನು ಕೊಂದು ಹಾಕಿದೆ ಎಂದು ದೂರಿದರು.

ಗೌರಿ ಲಂಕೇಶ್‌ ಸಮಾಜದಲ್ಲಿ ದನಿ ಇಲ್ಲದವರ ದನಿಯಾಗಿದ್ದರು. ವೈಚಾರಿಕತೆಯಿಂದ ಆಕೆಯನ್ನು ಎದುರಿಸಲಾಗದವರು ಕೊಂದಿದ್ದಾರೆ. ಗೌರಿ ಕೊಂದವರು ಹೇಡಿಗಳು. ಗೌರಿ ಲಂಕೇಶ್‌ ಅವರು ಇಂದು ನಮ್ಮ ಜತೆಗಿಲ್ಲ ಆದರೆ, ಅವರ ಅದಮ್ಯ ಚೇತನ ನಮ್ಮ ಜತೆಗಿದೆ ಎಂದು ಹೇಳಿದರು.

ವೈಯಕ್ತಿಕ ಸಮಸ್ಯೆಗಳಿಗೆ ಏನೂ ಕೇಳರಿಲಿಲ್ಲ: ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ಗೌರಿ ನನ್ನನ್ಮು ಹತ್ತಾರು ಬಾರಿ ಭೇಟಿಯಾಗಿದ್ದರು. ಆದರೆ, ಒಂದು ಬಾರಿಯೂ ಪತ್ರಿಕೆಗೆ, ಕುಟುಂಬಕ್ಕೆ, ವೈಯಕ್ತಿಕ ಕೆಲಸಗಳಿಗಾಗಿ, ಸಹಾಯ ಕೇಳಲು ಯಾವತ್ತೂ ಬಂದಿರಲಿಲ್ಲ. ಕೇವಲ ಆದಿವಾಸಿಗಳ, ರೈತರ, ಕಾರ್ಮಿಕರ ಸಮಸ್ಯೆಗಳಿಗಾಗಿ ಪರಿಹಾರ ಕೇಳಲು ಬರುತ್ತಿದ್ದರು ಎಂದು ಸ್ಮರಿಸಿದರು.

ಬೆದರಿಕೆ ಪತ್ರ ಬರೆದವರ ಬಂಧನ: ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿರುವ ಕಿಡಿಗೇಡಿಗಳು ಎಷ್ಟೇ ಪ್ರಬಲರಾಗಿದ್ದರೂ, ಅವರ ಹಿಂದೆ ಎಷ್ಟೇ ದೊಡ್ಡ ರಾಜಕೀಯ ಒತ್ತಾಸೆ ಇದ್ದರೂ ಅವರನ್ನು ಬಂಧಿಸಿ ಕಾನೂನು ಕ್ರಮಕ್ಕೆ ಒಪ್ಪಿಸಲಾಗುವುದು ಎಂದರು.

Advertisement

ಬಿಜೆಪಿ ಸೋಲಿಸಿದ್ದಕ್ಕಾಗಿ ಅಭಿನಂದನೆ: ಕೇರಳದ ಮಾಜಿ ಸಚಿವೆ ಶೈಲಜಾ ಮಾತನಾಡಿ, ನಾಡಿನ ಜನರನ್ನು ಜಾತಿ ಆಧಾರದಲ್ಲಿ ವಿಭಜಿಸಿ ಭ್ರಷ್ಟಾಚಾರ ಆಚರಿಸುತ್ತಿದ್ದ ಬಿಜೆಪಿ, ಆರ್‌ಎಸ್‌ಎಸ್‌ ಸಿದ್ಧಾಂತವನ್ನು ಹೀನಾಯವಾಗಿ ಸೋಲಿಸಿ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದಕ್ಕಾಗಿ ಖುಷಿ ಪಟ್ಟರು. ಅಖಿಲ ಭಾರತ ರೈತ ಆಂದೋಲನದ ನಾಯಕ ರೈತ ಮುಖಂಡ ರಾಕೇಶ್‌ಟಿಕಾಯತ್‌, ಮಾನವ ಹಕ್ಕು ಹೋರಾಟಗಾರ್ತಿ ತೀಸ್ತಾ ಸೆತಲ್ವಾದ್‌, ರಾಜಕೀಯ ಕಾರ್ಯಕರ್ತೆ ಏಂಜೆಲಾ ರಂಗದ್‌, ಬಹುಭಾಷಾ ನಟ ಪ್ರಕಾಶ್‌ ರೈ, ಕೇರಳದ ಮಾಜಿ ಸಚಿವೆ, ಶಾಸಕಿ ಶೈಲಜಾ ಟೀಚರ್‌, ಖ್ಯಾತ ಪತ್ರಕರ್ತೆ ಸುಪ್ರಿಯಾ ಶ್ರೀನಾಟೆ, ಮುಸ್ಲಿಂ ಒಕ್ಕೂಟದ ಮುಖಂಡ ಯಾಸಿನ್‌ ಮಲ್ಪೆ, ಮಾಜಿ ಸಚಿವ ಆಂಜನೇಯ ಉಪಸ್ಥಿತರಿದ್ದರು.

ಗೌರಿ ಹತ್ಯೆಕೋರರಿಗೆ ಶಿಕ್ಷೆ ಆಗಲಿದೆ: ಗೌರಿ ಕೊಂದ ಆರೋಪಿಗಳಿಗೆ ಶಿಕ್ಷೆ ಆದಾಗ ಮಾತ್ರ ಗೌರಿ ಆತ್ಮಕ್ಕೆ ಶಾಂತಿ ಸಿಗುತ್ತದೆ. ಪೊಲೀಸ್‌ ಅಧಿಕಾರಿಗಳ ಜತೆ ಈ ಬಗ್ಗೆ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದೇನೆ. ಸಾವಿರಕ್ಕೂ ಅಧಿಕ ಪುಟಗಳ ಆರೋಪ ಪಟ್ಟಿ ಸಲ್ಲಿಕೆಯಾಗಿ 500ಕ್ಕೂ ಹೆಚುÌ ಸಾಕ್ಷಿಗಳನ್ನು ಪಟ್ಟಿ ಮಾಡಲಾಗಿದೆ. ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ಕೂಡ ವೇಗವಾಗಿ ನಡೆಯುತ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ತನಿಖಾ ತಂಡದ ವೃತ್ತಿಪರತೆ, ಶ್ರಮ ವ್ಯರ್ಥ ಆಗುವುದಿಲ್ಲ. ಆರೋಪಿ ಗಳಿಗೆ ಖಂಡಿತಾ ಶಿಕ್ಷೆ ಆಗುತ್ತದೆ ಎನ್ನುವ ಭರವಸೆ ನನಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next