Advertisement
ಚಾಮುಂಡಿ ಬೆಟ್ಟದಲ್ಲಿ ಗುರುವಾರ ನಡೆದ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ಕೃಪೆಯಿಂದ ನಾನು ಯಾವುದೇ ತಪ್ಪು ಮಾಡಿಲ್ಲ. ಒಂದು ವೇಳೆ ಮಾಡಿದ್ದರೆ ಇಷ್ಟು ಸುದೀರ್ಘ ರಾಜ-ಕಾರಣ ಮಾಡಲು ಆಗುತ್ತಿರಲಿಲ್ಲ. ಚಾಮುಂಡೇಶ್ವರಿ ಕೃಪೆಯಿಂದ ಇಲ್ಲಿಯವರೆಗೆ ಇದ್ದೇನೆ ಎಂದರು.
ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಬೇರೆ ಪಕ್ಷದಲ್ಲಿ ಇದ್ದರೂ ಸತ್ಯದ ಮಾತು ಹೇಳಿದ್ದಾರೆ. ಸತ್ಯ ಮೇವ ಜಯತೇ. ಸತ್ಯಕ್ಕೆ ಯಾವಾಗಲೂ ಜಯ ಅಂತ. ಜನರ ಆಶೀರ್ವಾದ ಸರಕಾರದ ಮೇಲೆ, ನನ್ನ ಮೇಲೆ ಇರುವವರೆಗೂ ಯಾರಿಂದಲೂ ಏನೂ ಮಾಡಲು ಆಗುವುದಿಲ್ಲ. ಜಿಟಿಡಿಯೆ ನನ್ನನ್ನು ಈ ಕ್ಷೇತ್ರದಲ್ಲಿ ಸೋಲಿಸಿದ್ದು. ಅದು ನನ್ನ ಕೈಯ್ನಾರೆ ಮಾಡಿಕೊಂಡ ಸೋಲು. ನಾನು 9 ಬಾರಿ ಚುನಾವಣೆಯಲ್ಲಿ ಗೆದ್ದಿದ್ದೇನೆ. ಚಾಮುಂಡೇಶ್ವರಿ ಕೃಪೆಯಿಂದ ಇಲ್ಲಿಯವರೆಗೆ ಇದ್ದೇನೆ. ನಾನು ಯಾವ ತಪ್ಪೂ ಮಾಡಿಲ್ಲ ಎಂದರು.
Related Articles
ಹಂ.ಪ. ನಾಗರಾಜಯ್ಯ ಮೌಲ್ಯಯುತ ಭಾಷಣ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಸರಕಾರಗಳನ್ನು ವಾಮಮಾರ್ಗಗಳಲ್ಲಿ ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾ ರೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮಗಳಾಗಿದ್ದು, ಪ್ರಜಾಪ್ರಭುತ್ವ ಇನ್ನಷ್ಟು ಬಲಪಡಿಸಬೇಕು ಎಂದಿರುವುದು ಔಚಿತ್ಯಪೂರ್ಣವಾಗಿದೆ ಎಂದು ಹೇಳಿದರು.
Advertisement
ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ ಜನತೆ ನಮಗೆ ಅವಕಾಶ ಕೊಟ್ಟಿದ್ದಾರೆ. ಈಗಲೂ ಎಷ್ಟೇ ತೊಡಕುಗಳು ಎದುರಾದರೂ ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. 5 ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.