Advertisement

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

12:59 AM Oct 25, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆಯ ನೀತಿ ಸಂಹಿತೆ ಮುಗಿದ ಬಳಿಕ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ’ಯನ್ನು (ಜಾತಿ ಗಣತಿ ವರದಿ) ಸಚಿವ ಸಂಪುಟದಲ್ಲಿಟ್ಟು ಚರ್ಚಿಸಿದ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟದ ಪದಾಧಿಕಾರಿಗಳ ನಿಯೋಗಕ್ಕೆ ಭರವಸೆ ನೀಡಿದರು.

Advertisement

ಮಹಾಒಕ್ಕೂಟದ ಪ್ರಧಾನ ಸಂಚಾಲಕರಾದ ಕೆ.ಎಂ.ರಾಮಚಂದ್ರಪ್ಪ ನೇತೃತ್ವದ ನಿಯೋಗ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ವೇಳೆ ಮನವಿ ಪತ್ರ ಸ್ವೀಕರಿಸಿದ ನಂತರ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಈಗ ರಾಜ್ಯದಲ್ಲಿ ಉಪ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ನೀತಿ ಸಂಹಿತೆ ಮುಗಿದ ಬಳಿಕ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ”ಯನ್ನು ಸಚಿವ ಸಂಪುಟದಲ್ಲಿಟ್ಟು ಚರ್ಚಿ ಸಿ ಒಂದು ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದ್ದಾರೆ ಎಂದು ನಿಯೋಗದ ಮುಖಂಡರು ತಿಳಿಸಿದ್ದಾರೆ.

ಹಲವು ಬೇಡಿಕೆಗಳ ಈಡೇರಿಕೆಗೆ ಮನವಿ: ಇದೇ ವೇಳೆ ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟದ ಪದಾಧಿಕಾರಿಗಳ ನಿಯೋಗವು, ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಒಟ್ಟು ಮೀಸಲಾತಿಯ ಪ್ರಮಾಣವನ್ನು ಶೇ.75ಕ್ಕೆ ವಿಸ್ತರಿಸಬೇಕು. ಎಸ್‌ಸಿ, ಎಸ್‌ಟಿ. ಒಬಿಸಿ ಸಮುದಾಯಗಳ ಮೀಸಲಾತಿಯನ್ನು ಹೆಚ್ಚಿಸಬೇಕು. ರಾಜ್ಯದಲ್ಲಿ ಖಾಸಗಿ ರಂಗದಲ್ಲಿ ಮೀಸಲಾತಿ ಜಾರಿಗೆ ತರಲು ಕಾನೂನು ರೂಪಿಸಬೇಕು. ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ವಿಧಾನಸಭೆ, ಲೋಕಸಭೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಬೇಕು. ವಿಧಾನ ಪರಿಷತ್‌ ಮತ್ತು ರಾಜ್ಯಸಭೆಯಲ್ಲಿ ಪರಿಶಿಷ್ಟರಿಗೆ ಮೀಸಲಾತಿ ಕಲ್ಪಿಸಬೇಕು. ಈ ಕುರಿತು ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಸಿಎಂಗೆ ಆಗ್ರಹಿಸಿತು.

ಒಕ್ಕೂಟದ ಸಂಚಾಲಕರಾದ ಮಾವಳ್ಳಿ ಶಂಕರ್‌, ಬಿ.ಟಿ.ಲಲಿತಾ ನಾಯ್ಕ, ಅನಂತ ನಾಯಕ,ಮಾಜಿ ಶಾಸಕ ನೆ.ಲ. ನರೇಂದ್ರ ಬಾಬು, ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಎಂ.ಈರಣ್ಣ, ರವಿ ಮಾಕಳಿ, ಎಣ್ಣೆಗೆರೆ ಆರ್‌.ವೆಂಕಟರಾಮಯ್ಯ ಸೇರಿದಂತೆ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next