Advertisement

ಸಿಬಿಐ ತನಿಖೆ ಸ್ವಾಗತ, ಜಾರ್ಜ್‌ ರಾಜೀನಾಮೆ ಇಲ್ಲ: ಸಿಎಂ

08:45 AM Sep 06, 2017 | Team Udayavani |

ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ಸಿಬಿಐ ತನಿಖೆಗೆ ವಹಿಸಿರುವುದು ಸ್ವಾಗತಾರ್ಹ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಸಿಬಿಐ ಸುಪ್ರೀಂ ಕೋರ್ಟ್‌ ಆದೇಶದಂತೆ ತನಿಖೆ ನಡೆಸುತ್ತದೆ. ಕೇಂದ್ರ ಸರಕಾರದ ಅನೇಕ ಸಚಿವರ ಮೇಲೆಯೂ ಸಿಬಿಐ ತನಿಖೆ ನಡೆಯುತ್ತಿದೆ. ಅವರಾರೂ ರಾಜೀನಾಮೆ ನೀಡಿಲ್ಲ. ಗಣಪತಿ ಸಾವಿಗೆ ಕಾರಣ ಏನು ಎಂಬುವುದನ್ನು ತನಿಖೆ ಮಾಡಿ ವರದಿ ನೀಡುವಂತೆ ಕೋರ್ಟ್‌ ಸೂಚಿಸಿದೆ. ಅದಕ್ಕೆ ಜಾರ್ಜ್‌ ಏಕೆ ರಾಜೀನಾಮೆ ನೀಡಬೇಕು ಎಂದು ಸಿಎಂ ಪ್ರಶ್ನಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next