Advertisement

Hijab issue; ಹಿಜಾಬ್ ಬ್ಯಾನ್ ವಾಪಾಸ್ ವಿಚಾರದಲ್ಲಿ ಉಲ್ಟಾ ಹೊಡೆದ ಸಿಎಂ ಸಿದ್ದರಾಮಯ್ಯ

03:17 PM Dec 23, 2023 | Team Udayavani |

ಮೈಸೂರು: “ನಾನು ಶಾಲಾ – ಕಾಲೇಜುಗಳಲ್ಲಿ ಇದ್ದ ಹಿಜಾಬ್ ನಿಷೇಧವನ್ನು ವಾಪಸ್ ಮಾಡಿಲ್ಲ. ಸರ್ಕಾರ ಈ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದಷ್ಟೇ ಹೇಳಿದ್ದೇನೆ” ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಲ್ಟಾ ಹೊಡೆದಿದ್ದಾರೆ.

Advertisement

ಶುಕ್ರವಾರ ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಊಟ, ಉಡುಪು ಅವರವರ ಇಷ್ಟ. ಹೀಗಾಗಿ ಹಿಜಾಬ್ ನಿಷೇಧ ಆದೇಶ ವಾಪಸ್ ತೆಗೆದುಕೊಳ್ಳಲು ಹೇಳಿದ್ದೇನೆ ಎಂದು ಹೇಳಿದ್ದರು. ಇದು ಪಕ್ಷಗಳ ನಡುವೆ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿತ್ತು.

ಮೈಸೂರಿನಲ್ಲಿ ಈ ಬಗ್ಗೆ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಜಾಬ್ ನಿಷೇಧ ವಾಪಸ್ ಪಡೆಯಲು ಸರ್ಕಾರ ಚಿಂತನೆ ನಡೆಸುತ್ತಿದೆ ಅಂತ ನಾನು ಕಾರ್ಯಕ್ರಮದಲ್ಲಿ ಹೇಳಿದ್ದೇನೆ. ಯಾವ ಶೈಕ್ಷಣಿಕ ವರ್ಷದಿಂದ ಜಾರಿ ಎಂದು ಸರ್ಕಾರದ ಹಂತದಲ್ಲಿ ಚರ್ಚೆ ಮಾಡುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ನಂಜನಗೂಡು ತಾಲೂಕಿ‌ನ ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ಮಾತನಾಡಿದ್ದ ಸಿದ್ದರಾಮಯ್ಯ, ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ನಾನು ಅದಕ್ಕೆಲ್ಲ ಅವಕಾಶ ಕೊಡಲ್ಲ. ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಹೇಳಿದ್ದೇನೆ ಎಂದು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next