ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ| ಯತೀಂದ್ರ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಗುವ ಸಾಧ್ಯತೆ ಇದೆ. ಈ ಬಗ್ಗೆ ಶುಕ್ರವಾರ ಮೈಸೂರಿನಲ್ಲಿ ಮಾತನಾಡಿದ ಸಿಎಂ, ಯತೀಂದ್ರ ಅವರಿಗೆ ವಿಧಾನ ಪರಿಷತ್ತಿಗೆ ಸ್ಪರ್ಧಿಸುವ ಅವಕಾಶ ನೀಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದಿದ್ದಾರೆ.
“ವಿಧಾನಸಭಾ ಚುನಾವಣೆ ವೇಳೆ ನಾನು ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದೆ. ಆಗ ಕೋಲಾರ ಬೇಡ, ವರುಣದಿಂದ ಸ್ಪರ್ಧಿಸಿ ಎಂದು ಹೈಕಮಾಂಡ್ ಸೂಚಿಸಿತ್ತು.
ಆ ಸಂದರ್ಭದಲ್ಲಿ ಯತೀಂದ್ರ ಅವರು ವರುಣ ಕ್ಷೇತ್ರದ ಶಾಸಕರಾಗಿದ್ದರು. ಅಂದು ಕ್ಷೇತ್ರ ಬಿಟ್ಟುಕೊಟ್ಟ ಯತೀಂದ್ರ ಅವರನ್ನು ಎಂಎಲ್‌ಸಿ ಮಾಡುತ್ತೇವೆ ಎಂದು ವರಿಷ್ಠರು ಭರವಸೆ ಕೊಟ್ಟಿದ್ದರು. ಈಗ ವಿಷಯದಲ್ಲಿ ಹೈಕಮಾಂಡ್ ಏನು ಮಾಡುತ್ತಾರೆಯೋ ಗೊತ್ತಿಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಭರವಸೆ ನೀಡಿ ದಂತೆ ಪರಿಷತ್ ಸ್ಥಾನ ಸಿಗಲಿದೆ ಎಂಬ ಸುಳಿವು ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಚ್.ಸಿ. ಮಹ ದೇವಪ್ಪ ಕೂಡ ಸಿಎಂ ದಾಟಿಯಲ್ಲೇ ಮಾತ ನಾಡಿದ್ದು, ಹೈಕ ಮಾಂಡ್‌ನತ್ತ ಬೊಟ್ಟು ಮಾಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರವನ್ನು ಯತೀಂದ್ರ ತಂದೆಗಾಗಿ ತ್ಯಾಗ ಮಾಡಿದ್ದರು. ಹೀಗಾಗಿ ಈಗಿನ ಸಂದರ್ಭದಲ್ಲಿ ಯತೀಂದ್ರ ಅವರಿಗೆ ಪರಿಷತ್ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.