Advertisement

CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ​ಸಭೆ

11:01 PM May 14, 2024 | Team Udayavani |

ಬೆಂಗಳೂರು: ಶಾಸಕ ಎಚ್‌.ಡಿ. ರೇವಣ್ಣ ಅವರಿಗೆ ಜಾಮೀನು ಸಿಕ್ಕ ಬೆನ್ನಲ್ಲೇ ಸರಕಾರದಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಚಟುವಟಿಕೆಗಳು ಗರಿಗೆದರಿದ್ದು, ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಮಂಗಳವಾರ ಪ್ರಕರಣದ ಕುರಿತು ಸುದೀರ್ಘ‌ ಚರ್ಚೆ ನಡೆಯಿತು.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಗೃಹ ಸಚಿವ ಡಾ| ಜಿ. ಪರಮೇಶ್ವರ್‌, ಸಚಿವ ಬೈರತಿ ಸುರೇಶ್‌, ಸರಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌, ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌, ಗುಪ್ತದಳ ವಿಭಾಗದ ಎಡಿಜಿಪಿ ಶರತ್‌ಚಂದ್ರ ಮತ್ತಿತರರು ಭಾಗವಹಿಸಿದ್ದರು.

ಗಂಟೆಗೂ ಅಧಿಕ ಕಾಲ ಚರ್ಚೆ
ಪ್ರಜ್ವಲ್‌ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ. ಈ ಸಂದರ್ಭದಲ್ಲಿ ಸರಕಾದ ಮುಂದಿನ ನಡೆ ಏನಾಗಬೇಕು? ಪ್ರಕರಣ ಮುಂದುವರಿಸುವುದು ಹೇಗೆ? ಜಾಮೀನು ತಡೆ ಕೋರಿ ಮೇಲ್ಮನವಿ ಹೋಗಬೇಕೇ? ಇಂತಹ ಹಲವು ವಿಷಯಗಳ ಕುರಿತು ಒಂದು ಗಂಟೆಗೂ ಅಧಿಕ ಕಾಲ ಚರ್ಚೆ ನಡೆಯಿತು ಎನ್ನಲಾಗಿದೆ. ಅಧಿಕಾರಿಗಳು ಈ ಸಂದರ್ಭದಲ್ಲಿ ಹಲವು ಸಲಹೆಗಳನ್ನು ಸರಕಾರಕ್ಕೆ ನೀಡಿದರು ಎಂದು ಮೂಲಗಳು ತಿಳಿಸಿವೆ.

 

Advertisement

Udayavani is now on Telegram. Click here to join our channel and stay updated with the latest news.

Next