ಬೈಂದೂರು: ಕರಾವಳಿಯ ಸದ್ಯದ ಸ್ಥಿತಿಗೆ ಕೋಮುವಾದಿಗಳೇ ಕಾರಣ. ಅವರು ಕೋಮುವಾದ ಬಿಟ್ಟರೆ ಬೇರೆ ಏನೂ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಸೋಮವಾರ ಬೈಂದೂರಿನಲ್ಲಿ ನಡೆಯಲಿರುವ ರಾಜ್ಯ ಸರಕಾರದ ಸಮಾವೇಶದಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಅರೆಶಿರೂರಿನ ಹೆಲಿಪ್ಯಾಡ್ ಗೆ ಆಗಮಿಸಿ, ಅಲ್ಲಿಂದ ಬೈಂದೂರಿಗೆ ಆಗಮಿಸಿದ್ದ ವೇಳೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು.
ಯಾವುದೇ ಸಂಘಟನೆಯ ನಿಷೇಧದ ಬಗ್ಗೆ ಚರ್ಚಿಸಿಲ್ಲ. ಆದರೆ ಪಿಎಫ್ ಐ, ಬಜರಂಗದಳ, ಶ್ರೀರಾಮಸೇನೆ ಸಂಘಟನೆಗಳ ಮೇಲೆ ನಿಗಾ ವಹಿಸಲು ಸೂಚಿಸಿದ್ದೇನೆ ಎಂದು ಹೇಳಿದರು.
Related Articles
ಬೈಂದೂರಿನ ಪ್ರೌಢಶಾಲೆಯ ಎದುರಿನ ಗಾಂಧಿ ಮೈದಾನದಲ್ಲಿನ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದು, ಶಾಸಕ ಗೋಪಾಲ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 490.97 ಕೋಟಿ ರೂಪಾಯಿ ವೆಚ್ಚದಲ್ಲಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಸೇರಿದಂತೆ ಹಲವಾರು ಕಾಮಗಾರಿಗಳಿಗೆ ಸಿಎಂ ಶಿಲಾನ್ಯಾಸ ನೆರವೇರಿಸಿದರು.
ಸಾಧನಾ ಸಮಾವೇಶಕ್ಕೂ ಮುನ್ನ ಬೈಂದೂರು ವಿಧಾನಸಭಾ ಕ್ಷೇತ್ರದ ಸುತ್ತಮುತ್ತಲಿನಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರ ಬೃಹತ್ ಬೈಕ್ ಜಾಥಾ ನಡೆಯಿತು. ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.