Advertisement

CM Siddaramaiah ತವರಲ್ಲಿ ಇಂದು ರಾಜಕೀಯ ಶಕ್ತಿ ಪ್ರದರ್ಶನ

10:53 PM Mar 26, 2024 | Team Udayavani |

ಮೈಸೂರು:  ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರು ಲೋಕಸಭಾ ಕ್ಷೇತ್ರ ರಾಜ್ಯದಲ್ಲಿ ಹೈವೋಲ್ಟೆàಜ್‌ ಕ್ಷೇತ್ರವಾಗಿ ಮಾರ್ಪಟ್ಟಿದೆ. ಬುಧವಾರ ಒಂದೇ ದಿನ ಕಾಂಗ್ರೆಸ್‌ ಮತ್ತು ಮೈತ್ರಿ ಪಕ್ಷದ ಘಟಾನುಘಟಿ ನಾಯಕರು ಮೈಸೂರಲ್ಲಿ ಪ್ರತ್ಯೇಕವಾಗಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

Advertisement

ಈಗಾಗಲೇ ಮೈಸೂರಿನಲ್ಲಿ ಬೀಡು ಬಿಟ್ಟಿರುವ ಸಿದ್ದರಾಮಯ್ಯ ಅವರು ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲ್ಲಲು ಪೂರಕ ವಾತವಾರಣ ಸೃಷ್ಟಿ ಮತ್ತು ಅದಕ್ಕೆ ಬೇಕಾದ ವೇದಿಕೆ ಸಜ್ಜುಗೊಳಿಸುವಲ್ಲಿ ನಿರತರಾಗಿದ್ದಾರೆ. ಈಗಾಗಲೇ ಆಪರೇಷನ್‌ ಹಸ್ತಕ್ಕೆ ಮುಂದಾಗಿರುವ ಕಾಂಗ್ರೆಸ್‌ ನಾಯಕರು ಮೈಸೂರು ಭಾಗದಲ್ಲಿ ಲಿಂಗಾ ಯತ, ಬ್ರಾಹ್ಮಣ ಸುಮುದಾಯದ ಪ್ರಮುಖ ಮುಖಂಡರನ್ನು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಸುವ ಮೂಲಕ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇತ್ತ ಮೈತ್ರಿ ಪಕ್ಷಗಳ ನಾಯಕರು ಬಿಜೆಪಿ-ಜೆಡಿಎಸ್‌ ಸಮನ್ವಯ ಸಮಿತಿ ಸಭೆ ಹೆಸರಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಹೊಂದಾಣಿಕೆ ತರಲು ಮುಂದಾಗಿದ್ದಾರೆ.

ಬುಧವಾರ ಬೆಳಗ್ಗೆ ಮೈಸೂರಿನ ಕೆ.ಆರ್‌.ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಮುಖಂಡರ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಸಮಾವೇಶ ಆಯೋಜಿಸಿದ್ದು ಇದರಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌,  ಸಚಿವ ದಿನೇಶ್‌ ಗುಂಡೂರಾವ್‌ ಸೇರಿದಂತೆ ಅನೇಕರು ಪಾಲ್ಗೊಳ್ಳಲಿ ದ್ದಾರೆ. ಬಿಎಸ್‌ವೈ ಆಪ್ತ ವಲಯದಲ್ಲಿ ಗುರುತಿಸಿ ಕೊಂಡಿದ್ದ ಬ್ರಾಹ್ಮಣ ಸಮುದಾಯದ ಎಚ್‌.ವಿ. ರಾಜೀವ್‌ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರು ತ್ತಿದ್ದಾರೆ. ಇವರ ಜತೆ ಜೆಡಿಎಸ್‌ ಮುಖಂಡರೂ  ಕಾಂಗ್ರೆಸ್‌ ಸೇರಲಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಮೈತ್ರಿ ಪಕ್ಷಗಳ ಪ್ರತಿತಂತ್ರ
ಬಿಜೆಪಿ ಮತ್ತು ಜೆಡಿಎಸ್‌ ಪ್ರಮುಖ ನಾಯಕರನ್ನು ಸೆಳೆಯುತ್ತಿರುವ ಕಾಂಗ್ರೆಸ್‌ಗೆ ಹಾಗೂ ಒಕ್ಕಲಿಗ ಸಮುದಾಯದ ಮತಗಳು ವಿಭಜನೆ ಆಗದಂತೆ ತಡೆಯಲು ಮೈತ್ರಿ ಪಕ್ಷ ಪ್ರತಿತಂತ್ರ ಹೆಣೆಯುತ್ತಿದ್ದು ಸ್ವತಃ ಮಾಜಿ ಸಿಎಂ ಕುಮಾರಸ್ವಾಮಿ ಅಖಾಡಕ್ಕಿಳಿಯುತ್ತಿದ್ದಾರೆ. ಬುಧವಾರ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೈಸೂರಿಗೆ ಆಗಮಿಸುತ್ತಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಕುಮಾರಸ್ವಾಮಿ ಅವರು ಜೆಡಿಎಸ್‌ ಕೋರ್‌ ಕಮಿಟಿ ಸಭೆ ನಡೆಸಲಿದ್ದಾರೆ. ಬಳಿಕ ವಿಜಯೇಂದ್ರ ಜತೆಗೂಡಿ ಬಿಜೆಪಿ-ಜೆಡಿಎಸ್‌ ಸಮನ್ವಯ ಸಮಿತಿ ಸಭೆ ನಡೆಸಲಿದ್ದಾರೆ. ಈ ಮೂಲಕ ಎರಡೂ ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿ ಹೊಂದಾಣಿಕೆಯ ಬೆಸುಗೆ ಹಾಕಲು ಮುಂದಾಗಿದ್ದಾರೆ.

-ಸತೀಶ್‌ ದೇಪುರ

Advertisement
Advertisement

Udayavani is now on Telegram. Click here to join our channel and stay updated with the latest news.

Next